ಪ್ರಯಾಗರಾಜ್ : ಬಾಲಿವುಡ್ ಹಾಗೂ ದಕ್ಷಿಣ ಸಿನಿಮಾದಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ನಟಿ ಮಮತಾ ಕುಲಕರ್ಣಿ ಇದೀಗ ಲೌಕಿಕ ಜಗತ್ತನ್ನು ತೊರೆದು ಆಧ್ಯಾತ್ಮಿಕ ಜಗತ್ತಿಗೆ ಇಳಿದಿದ್ದಾರೆ.

90ರ ದಶಕದಲ್ಲಿ ಬಾಲಿವುಡ್ ಸೇರಿದಂತೆ ಕನ್ನಡ ಸಿನಿಮಾದಲ್ಲಿ ನಟಿಸಿರುವ ಮಮತಾ, ಇದೀಗ ಕಿನ್ನರ ಅಖಾಡಕ್ಕಿಳಿಯುವ ಮೂಲಕ ಮಹಾಮಂಡಲೇಶ್ವರಿಯಾಗಿದ್ದಾರೆ. ಮಮತಾ ಕುಲಕರ್ಣಿ ಹೆಸರನ್ನು ಬದಲಿಸಿಕೊಂಡು `ಮಾಯಿ ಮಮತಾ ನಂದಗಿರಿ’ ಎಂದು ನಾಮಕರಣ ಮಾಡಿಕೊಂಡಿದ್ದಾರೆ.

ಮಹಾಕುಂಭಮೇಳದಲ್ಲಿ ಬಾಗಿಯಾಗಿರುವ ನಟಿ, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಬಳಿಕ ತಮ್ಮ ಸ್ವಂತ ಪಿಂಡ ಪ್ರದಾನಮಾಡುವ ಮೂಲಕ ʼಜೂನಾ ಅಖಾ ಡದ ಅಡಿʼ ಕಾರ್ಯನಿರ್ವಹಿಸುವ ಕಿನ್ನರ ಅಖಾಡಕ್ಕೆ ಸೇರಿಕೊಂಡಿದ್ದು, ಮಹಾಮಂಡಲೇಶ್ವರರಾಗಿದ್ದಾರೆ. ಇವರಿಗೆ ಕಿನ್ನರ ಅಖಾಡದ ಆಚಾರ್ಯ ಮಹಾಮಂಡಲೇಶ್ವರ ಲಕ್ಷ್ಮಿ ನಾರಾಯಣ ತ್ರಿಪಾಠಿ ದೀಕ್ಷೆ ನೀಡಿದರು ಎನ್ನಲಾಗಿದೆ.

Leave a Reply

Your email address will not be published. Required fields are marked *