ಮೈಕ್ರೋ ಫೈನಾನ್ಸ್ ನವರಿಂದ ಸಾರ್ವಜನಿಕರಿಗೆ ಕಿರುಕುಳ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಯಾರೇ ಸಂತ್ರಸ್ತರು ದೂರು ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ.
ಈಗಾಗಲೇ ಕೆಲ ಮೈಕ್ರೋ ಫೈನಾನ್ಸ್ ನವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಇದನ್ನು ತಡೆಯಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ. ಪರವಾನಗಿ ಇಲ್ಲದ ಹಣಕಾಸು ಸಂಸ್ಥೆಗಳ ಬಗ್ಗೆ ಸರ್ವೇ ಮಾಡಬೇಕಿದೆ ಎಂದು ಹೇಳಿದರು.
ಕಾರಣಾಂತರಗಳಿಂದ ನಿನ್ನೆ ನಡೆದ ಶ್ರೀ ಶಿವಕುಮಾರ ಸ್ವಾಮೀಜಿಗಳ ಸಂಸರಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಇಂದು ಶ್ರೀಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ಪೂಜೆ ಸಲ್ಲಿಸಲಾಗಿದೆ.
ಶ್ರೀಗಳ ಸಾಧನೆ ಇಡೀ ಜಗತ್ತಿಗೆ ಗೊತ್ತಿದೆ. ಅವರನ್ನು ನಾವು ಸರಿಸಬೇಕು. ಪುಣ್ಯ ಸರಣೆ ದಿನವನ್ನು ದಾಸೋಹ ದಿನವನ್ನಾಗಿ ಅರ್ಥಪೂರ್ಣವಾಗಿ ಆಚರಣೆ ಮಾಡಲು ಸರ್ಕಾರದ ಹಂತದಲ್ಲಿ ಚರ್ಚೆ ಮಾಡಲಾಗುವುದು ಎಂದರು.