ಬೆಂಗಳೂರು : ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದ ಪ್ರಸಾದ್ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನ ಹೆಸರಘಟ್ಟ ಸಮೀಪದ ರೆಸಾರ್ಟ್‌ನಲ್ಲಿ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಸ್ಕಂದ ಪ್ರಸಾದ್ ವಿವಾಹ ಮಹೋತ್ಸವ ನೆರವೇರಿತು. ರಾಜಕೀಯ ಮುಖಂಡರು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನವಜೋಡಿಗಳಿಗೆ ಶುಭ ಹಾರೈಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ವಿ ಸೋಮಣ್ಣ, ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಬಿಜೆಪಿ ಶಾಸಕರು, ಸಂಸದರು, ಹಿಂದೂಪರ ಸಂಘಟನೆ ನಾಯಕರು ಸೇರಿದಂತೆ ಇನ್ನಿತರರು ಭಾಗಿಯಾಗಿ ಶುಭ ಕೋರಿದರು.
ಮಾ.9 ರ ಭಾನುವಾರ ಆರತಕ್ಷತೆ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ. ಬೆಳಗ್ಗೆ 10:30 ರಿಂದ 1:30 ರವರೆಗೆ ರಿಸೆಪ್ಪಷನ್ ನಡೆಯಲಿದ್ದು, ಗಣ್ಯರು ಭಾಗಿಯಾಗಲಿದ್ದಾರೆ.