ಬೆಂಗಳೂರು : ಮುಡಾ ಹಗರಣದ ತನಿಖೆ ನಡೆಸಿರುವ ಲೋಕಾಯುಕ್ತ ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ ನೀಡಿದೆ ಎನ್ನುವ ಮಾಹಿತಿ ಮಾಧ್ಯಮಗಳಿಗೆ ಸಿಕ್ಕಿದ್ದು, ಈ ಬಗ್ಗೆ ಮಾಧ್ಯಮಗಳು ಸಿಎಂ ಅವರನ್ನು ಕೇಳಿದಾಗ, ತನಗೇನೂ ಗೊತ್ತಿಲ್ಲರೀ ಎಂದು ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದ್ದಾರೆ.

ಮುಡಾ ಹಗರಣದಲ್ಲಿ, ಜಮೀನು ಡೀನೋಟಿಫೈ ಮಾಡುವಾಗ ಮತ್ತು ಭೂಪರಿವರ್ತನೆ ಮಾಡುವಾಗ ಮೈಸೂರಿನ ಮುಡಾ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಲೋಕಾಯುಕ್ತದ ತನಿಖಾ ವರದಿಯಲ್ಲಿ ಹೇಳಲಾಗಿದೆ. ಆದರೆ, ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರ ಪಾತ್ರ ಎಲ್ಲೂ ಕಂಡು ಬಂದಿಲ್ಲ ಎಂದೂ ಸ್ಪಷ್ಟಪಡಿಸಲಾಗಿದೆ.

ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರವಾದ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಯನ್ನು ಲೋಕಾಯುಕ್ತ ಪೂರ್ಣಗೊಳಿಸಿ ವರದಿ ಸಿದ್ಧಪಡಿಸಿದೆ. ಈ ವರದಿಯನ್ನು ಸೋಮವಾರ (ಜ. 27) ಕೋರ್ಟ್​ಗೆ ಸಲ್ಲಿಕೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *