ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದನ್ನು ವಿರೋಧಿಸಿ ಬಿಜೆಪಿ ಶಾಸಕರು ಇಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತಾಡಿದ ಮುನಿರತ್ನ ತಮ್ಮ ಎಡಬಲದಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯರ ಮುಖವಾಡಗಳನ್ನು ಧರಿಸಿದ ಇಬ್ಬರು ವ್ಯಕ್ತಿಗಳನ್ನು ನಿಲ್ಲಿಸಿಕೊಂಡಿದ್ದರು. ಶಿವಕುಮಾರ್ ಮುಖವಾಡ ಧರಿಸಿದ ವ್ಯಕ್ತಿಯ ಕುತ್ತಿಗೆಯಲ್ಲಿ ನಾಮಿನೇಷನ್ ಕುಮಾರ್ ಅಂತ ಪ್ಲಕಾರ್ಡ್ ಜೋತಾಡುತ್ತಿದ್ದರೆ ಮತ್ತೊಂದು ವ್ಯಕ್ತಿಯ ಕುತ್ತಿಗೆಯಿಂದ ಲೂಟಿ ರಾಮಯ್ಯ ಎಂದು ಹೇಳಿದರು.