ಬೆಂಗಳೂರು : ರೇಣುಕಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಬಳಿ ಇರುವ ಗನ್ ಲೈಸೆನ್ಸ್’ನ್ನು ಪೊಲೀಸರು ಹಿಂಪಡೆಯುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದಿದೆ.
ಈ ಕೊಲೆ ಪ್ರಕರಣದಲ್ಲಿ ಈಗಾಗಲೇ ಜಾಮೀನು ಮೇಲೆ ಬಿಡುಗಡೆಯಾಗಿರುವ ದರ್ಶನ್, ಪರವಾನಗಿ ಗನ್ ಬಳಸಿ ಪ್ರಕರಣ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ನಿಮ್ಮ ಗನ್ ಲೈಸೆನ್ಸ್ ಏಕೆ ರದ್ದುಗೊಳಿಸಬಾರದು ಎಂದು ಪ್ರಶ್ನಿಸಿ, ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹು ಅವರು ದರ್ಶನ್ಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ನೋಟಿಸ್ ತಲುಪಿದ 7 ದಿನಗಳೊಳಗೆ ಸ್ಪಷ್ಟನೆ ನೀಡುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ. ದರ್ಶನ್ ಸ್ಪಷ್ಟನೆ ನೀಡಿದ ಬಳಿಕ ಅದನ್ನು ಪರಿಶೀಲಿಸಿ ಗನ್ ಲೈಸೆನ್ಸ್ ಹಿಂಪಡೆಯುವ ಬಗ್ಗೆ ಪೊಲೀಸರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ತಿಳಿದುಬಂದಿದೆ.