ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ನಂತರ ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ. ರೆಹಮಾನ್ (58) ಅವರನ್ನು ಬೆಳಗ್ಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಇಸಿಜಿ ಮತ್ತು ಎಕೋಕಾರ್ಡಿಯೋಗ್ರಾಮ್ ಸೇರಿದಂತೆ ಕೆಲವು ಪರೀಕ್ಷೆಗಳಿಗೆ ಒಳಪಡಿಸಲಾಯಿತು. ಅವರು ಆಂಜಿಯೋಗ್ರಾಮ್ ಪರೀಕ್ಷೆಗೆ ಒಳಗಾಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಇತ್ತೀಚೆಗೆ, ರೆಹಮಾನ್ ಅವರ ಮಾಜಿ ಪತ್ನಿ ಸೈರಾ ಬಾನು ಕೂಡ ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಸುದ್ದಿಯನ್ನು ಅವರ ವಕೀಲೆ ವಂದನಾ ಶಾ ಅಧಿಕೃತ ಹೇಳಿಕೆಯ ಮೂಲಕ ಹಂಚಿಕೊಂಡಿದ್ದಾರೆ.
ರಂಜಾನ್ ಉಪವಾಸದಿಂದ ನಿರ್ಜಲೀಕರಣದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಶಸ್ತ್ರಚಿಕಿತ್ಸೆ ಬಳಿಕ ರೆಹಮಾನ್ ಆರೋಗ್ಯ ಸದ್ಯಕ್ಕೆ ಸ್ಥಿರ ಎಂದ ವೈದ್ಯರು ತಿಳಿಸಿದರು. ಚೆನ್ನೈ ಆಸ್ಪತ್ರೆಯಿಂದ ಎ.ಆರ್ ರೆಹಮಾನ್ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ.