ಮಾಜಿ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರ ಮನೆಯಲ್ಲಿ ನಾಮಕರಣ ಸಂಭ್ರಮ ಮನೆ ಮಾಡಿದೆ. ಅಂಬರೀಶ್ ಮೊಮ್ಮಗನ ನಾಮಕರಣ ಇಂದು ಪ್ರತಿಷ್ಠಿತ ಹೋಟೆಲ್‌ನಲ್ಲಿ ನಡೆಯಲಿದೆ.

ಈ ನಾಮಕರಣ ಸಮಾರಂಭಕ್ಕೆ ಸ್ಯಾಂಡಲ್‌ವುಡ್‌ನ ಅನೇಕ ಗಣ್ಯರಿಗೆ ಆಹ್ವಾನ ನೀಡಲಾಗಿದ್ದು, ಜೊತೆಗೆ ಈ ನಾಮಕರಣ ಕಾರ್ಯಕ್ರಮದಲ್ಲಿ ದರ್ಶನ್ ಭಾಗಿ ಆಗ್ತಾರಾ ಅನ್ನೋ ಪ್ರಶ್ನೆ ಮೂಡಿ ಬಂದಿದೆ.

ಮೊನ್ನೆಯಷ್ಟೇ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಅಭಿಷೇಕ್ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ಅನ್‌ಫಾಲೋ ಮಾಡಿದ್ದರು. ಅಂಬರೀಶ್ ಕುಟುಂಬದ ಮೇಲೆ ದರ್ಶನ್‌ಗೆ ಮುನಿಸು ಎಂದು ಹೇಳಲಾಗಿತ್ತು.

ಆದರೆ, ಆ ರೀತಿಯ ಮುನಿಸು ಯಾವುದೂ ಇಲ್ಲ ಅಂತ ಈಗಾಗಲೇ ಸುಮಲತಾ ಅಂಬರೀಶ್ ಸ್ಪಷ್ಟ ಪಡಿಸಿದ್ದಾರೆ. ಅಲ್ಲದೇ, ಯಾವತ್ತಿದ್ದರೂ ದರ್ಶನ್ ಮನೆಮಗ ಅಂತಾನೂ ಹೇಳಿದ್ದಾರೆ. ಅಭಿಷೇಕ್ ಮತ್ತು ಅವಿವಾ ದಂಪತಿಯ ಮಗುವಿನ ನಾಮಕರಣಕ್ಕೆ ಮನೆಮಗ ದರ್ಶನ್ ಬರ್ತಾರ ? ಬರಲ್ವಾ ? ಅನ್ನೋದು ಕುತೂಹಲಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *