ಬೆಂಗಳೂರು : ಬೆಂಗಳೂರಿನಲ್ಲಿ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸ್ಥಳದ ಆಯ್ಕೆಯ ಕುರಿತು ಚರ್ಚೆ ನಡೆಸುವುದು ಅನಗತ್ಯ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಹೇಳಿದರು.
ಸುದ್ದಿಗಾರರೊಂದಗೆ ಮಾತನಾಡಿದ ಸಚಿವ ಪರಮೇಶ್ವರ್, ಬೆಂಗಳೂರಿನ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತುಮಕೂರು ಜಿಲ್ಲೆಯಲ್ಲಿ ಆಗಲಿ ಎಂಬುವುದು ನಮ್ಮ ಬೇಡಿಕೆ. ಅಂತಿಮವಾಗಿ ಕೇಂದ್ರ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿ ಸ್ಥಾಪನೆ ಮಾಡಬೇಕು ಎಂಬ ನಿಟ್ಟಿನಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, 2ನೇ ಏರ್‌ಪೋರ್ಟ್ ತುಮಕೂರಿನಲ್ಲೇ ಆಗಬೇಕೆಂಬುವುದು ನಮ್ಮ ಬೇಡಿಕೆಯಾಗಿದೆ. ಬೇರೆಯವರೂ ತಮ್ಮದೇ ಆದ ಬೇಡಿಕೆಯನ್ನು ಇಡಬಹುದು. ಇದರ ಬಗ್ಗೆ ಚರ್ಚಿಸಿ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ಹೇಳಿದರು.