ಚಂಡೀಗಢ : ಭೀಕರ ರಸ್ತೆ ಅಪಘಾತದಲ್ಲಿ ಡಬಲ್ ಒಲಿಂಪಿಕ್ ಪದಕ ವಿಜೇತೆ ಶೂಟರ್ ಮನು ಭಾಕರ್ ಅವರ ಸಂಬಂಧಿಗಳಿಬ್ಬರು ಮೃತಪಟ್ಟಿರುವ ಘಟನೆ ಹರಿಯಾಣದ ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಇಂದು ನಡೆದಿದೆ.
ಸ್ಕೂಟರ್ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಲಿಂಪಿಕ್ಸ್ ಪದಕ ವಿಜೇತೆ ಶೂಟರ್ ಮನು ಭಾಕರ್ ಕುಟುಂಬಸ್ಥರು ಸಾವನ್ನಪ್ಪಿದ್ದಾರೆ. ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಸ್ಕೂಟರ್ಗೆ ಬ್ರಿಝಾ ಕಾರು ಡಿಕ್ಕಿ ಹೊಡೆದಿದ್ದು, ಭಾಕರ್ ಅಜ್ಜಿ ಮತ್ತು ಚಿಕ್ಕಪ್ಪ ಮೃತಪಟ್ಟಿದ್ದಾರೆ.
ಚಿಕ್ಕಪ್ಪ ಯುದ್ಧ್ವೀರ್ ಸಿಂಗ್ ಮತ್ತು ಅಜ್ಜಿ ಸಾವಿತ್ರಿ ದೇವಿ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ರಾಂಗ್ ಸೈಡ್ನಿಂದ ವೇಗವಾಗಿ ಬಂದ ಕಾರು ಸ್ಕೂಟರ್ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಮನು ಭಾಕರ್ ಅವರ ಚಿಕ್ಕಪ್ಪ, ಅಜ್ಜಿ ಸ್ಥಳದಲ್ಲೇ ಪ್ರಾಣ ಚೆಲ್ಲಿದ್ದಾರೆ. ಅಪಘಾತದ ತೀವ್ರತೆಗೆ ಇಬ್ಬರು ನೆಲಕ್ಕೆ ಎಸೆಯಲ್ಪಟ್ಟಿದ್ದು, ಕಾರು ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ ಎಂದು ತಿಳಿದು ಬಂದಿದೆ.
ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು ಎಂದು ವರದಿಯಾಗಿದೆ.