ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ 4ನೇ ಮ್ಯಾಚ್ ಶುರುವಾಗಲಿದ್ದು. ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.
ಏಕೆಂದರೆ ಮೊದಲ ಮೂರು ಮ್ಯಾಚ್ಗಳಲ್ಲಿ ಜಸ್ಪ್ರೀತ್ ಬುಮ್ರಾ ಅವರನ್ನು ಹೊರತುಪಡಿಸಿ ಟೀಮ್ ಇಂಡಿಯಾ ವೇಗಿಗಳು ಪರಿಣಾಮಕಾರಿಯಾಗಿಲ್ಲ. ಹೀಗಾಗಿ ಮೆಲ್ಬೋರ್ನ್ನಲ್ಲಿ ಹೆಚ್ಚುವರಿ ಸ್ಪಿನ್ ಆಲ್ರೌಂಡರ್ನನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.
ಅದರಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ಕಾಣಿಸಿಕೊಳ್ಳಬಹುದು. ಹಾಗೆಯೇ ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಆಕಾಶ್ ದೀಪ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಮುಂದುವರೆಯಬಹುದು.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್, ತನುಷ್ ಕೋಟ್ಯಾನ್.
ಇನ್ನು ಈ ಪಂದ್ಯದಲ್ಲೂ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಕಣಕ್ಕಿಳಿದರೆ, ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಐದನೇ ಸ್ಥಾನದಲ್ಲಿ ರಿಷಭ್ ಪಂತ್ ಆಡಿದರೆ, ಆರನೇ ಕ್ರಮಾಂಕದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರೆ.