ಕೋಲಾರ : ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿಗಳು ಜಿಲ್ಲೆಯಾದ್ಯಂತ ಅನಧಿಕೃತವಾಗಿ ತೆರೆದಿದ್ದ 8 ನಕಲಿ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಿದ್ದಾರೆ.
ಶ್ರೀನಿವಾಸಪುರದಲ್ಲಿ 6 ಕ್ಲಿನಿಕ್, ಬಂಗಾರಪೇಟೆ, ಕೋಲಾರದಲ್ಲಿ ತಲಾ ಒಂದು ನಕಲಿ ಕ್ಲಿನಿಕ್ ಮೇಲೆ ದಾಳಿ ಮಾಡಲಾಗಿದೆ. ಐದು ತಂಡಗಳಿಂದ ಕೋಲಾರ ಜಿಲ್ಲೆಯಾದ್ಯಂತ ದಾಳಿ ನಡೆಸಿದ್ದಾರೆ. ಈ ವೇಳೆ ವೈದ್ಯಕೀಯ ವಿದ್ಯಾರ್ಹತೆ ಹೊಂದಿಲ್ಲದ ಮತ್ತು ಅನಧಿಕೃತವಾಗಿ ಕ್ಲಿನಿಕ್ ತೆರದು ಚಿಕಿತ್ಸೆ ನೀಡುತ್ತಿರುವುದು ಕಂಡುಬಂದಿದೆ.
ಡಿಎಚ್‌ಓ ಡಾ.ಶ್ರೀನಿವಾಸ ನೇತೃತ್ವದಲ್ಲಿ ದಾಳಿ ನಡೆಸಿದ್ದು, ದಾಳಿಯ ವೇಳೆ ಇದ್ದ ಕೆಲ ಔಷಧಿಗಳನ್ನು ಜಪ್ತಿಪಡಿಸಿಕೊಳ್ಳಲಾಗಿದೆ. 5 ವೈದ್ಯಾಧಿಕಾರಿಗಳ ತಂಡದಿಂದ ದಾಳಿ ಮಾಡಿ ನಕಲಿ ಕ್ಲಿನಿಕ್‌ಗಳಿಗೆ ಬೀಗ ಜಡಿಯಲಾಗಿದೆ. ಈ ವೇಳೆ ವೈದ್ಯ ಅಧಿಕಾರಿಗಳು ಸ್ಟಿರಾಯಿಡ್ ಹಾಗೂ ಕೆಲ ಔಷಧಗಳನ್ನು ವಶಕ್ಕೆ ಪಡೆದುಕೊಂಡು ಕ್ರಮಕ್ಕೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.