ಆಕಸ್ಮಿಕವಾಗಿ ಗುಂಡು ತಗುಲಿ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾವು!
ಚಂಡೀಗಢ : ಪಂಜಾಬ್‌ನ ಲುಧಿಯಾನ ಕ್ಷೇತ್ರದ ಆಪ್ ಶಾಸಕ ಗುರುಪ್ರೀತ್ ಗೋಗಿ ಆಕಸ್ಮಿಕವಾಗಿ ಗುಂಡು ತಗುಲಿ ನೆನ್ನೆ ತಡರಾತ್ರಿ ಸಾವನ್ನಪ್ಪಿದ್ದಾರೆ. ಗುರುಪ್ರೀತ್ ಗೋಗಿ (58) ಅವರ ತಲೆಗೆ ಗುಂಡು ತಗುಲಿದ ನಂತರ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟು ಹೊತ್ತಿಗಾಗಲೇ ಶಾಸಕರು…
ಆಶಾ ಕಾರ್ಯಕರ್ತೆಯರಿಗೆ ಗೌರವಧನ ನೀಡಲು ಸರ್ಕಾರ ಒಪ್ಪಿಗೆ..!
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಇಂದು ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ರೂ. ಗೌರವಧನವನ್ನು ಏ.1ರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ. ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ. ಹಾಗೂ ಕೇಂದ್ರ…
ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ!
ಬೆಂಗಳೂರು : ರಾಜ್ಯದಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ಹಾಗೂ ಮಾರ್ಚ್ 21ರಿಂದ ಏಪ್ರಿಲ್ 04 ರವರೆಗೆ ಎಸ್‌ಎಸ್‌ಎಲ್‌ಸಿ…
ಪ್ರಯಾಣಿಕರ ಗಮನಕ್ಕೆ: ನಮ್ಮ ಮೆಟ್ರೋ ಸಂಚಾರ ಸಮಯ ಬದಲಾವಣೆ
ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಬಿಎಂಆರ್ಸಿಎಲ್ ಹೊಸ ಅಪ್ಡೇಟ್ವೊಂದನ್ನು ಹೊತ್ತು ತಂದಿದೆ. ಬೆಂಗಳೂರು ನಗರದಿಂದ ವಾರಾಂತ್ಯದಲ್ಲಿ ಊರಿಗೆ ತೆರಳಿ ನಂತರ ಸೋಮವಾರ ನಗರಕ್ಕೆ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ ಸಂಪರ್ಕವನ್ನು ಒದಗಿಸಬೇಕಿದೆ. ಈ…
ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ; ಮೂರು ದಿನ ಕಾರ್ಯಕ್ರಮ?
ಲಕ್ನೋ : ಅಯೋಧ್ಯೆಯನ್ನು ಪ್ರಭು ಶ್ರೀರಾಮನ ಜನ್ಮಸ್ಥಳವೆಂದು ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. ಕಳೆದ ವರ್ಷವಷ್ಟೇ ಅಯೋಧ್ಯೆಯಲ್ಲಿ ರಾಮ ದೇವಾಲಯದ ನಿರ್ಮಾಣ ಕಾರ್ಯ ಪೂರ್ಣಗೊಂಡು ಲಕ್ಷಾಂತರ ಜನರು ಇಲ್ಲಿನ ರಾಮನ ದರ್ಶನ ಪಡೆದುಕೊಂಡಿದ್ದಾರೆ. ಅಯೋಧ್ಯೆಯಲ್ಲಿನ ರಾಮ ಮಂದಿರವು ಹಿಂದೂ ಧರ್ಮೀಯರ ಜೀವಾಳವಾಗಿದ್ದು,…
5 ವರ್ಷ ಕಾಂಗ್ರೆಸ್ ಸರ್ಕಾರ ಇದ್ದೇ ಇರುತ್ತೆ – ಡಿಕೆಶಿ
ಬೆಂಗಳೂರು : ಯಾವ ಪವರ್ ಇಲ್ಲ, ಯಾವ ಶೇರಿಂಗ್ ಇಲ್ಲ… 5 ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ಜಾತಿ ಗಣತಿಗೆ ಪ್ರಬಲ ಸಮುದಾಯಗಳ ವಿರೋಧ ವಿಚಾರವಾಗಿ ಮಾತನಾಡಿದ ಡಿಕೆಶಿ, ನನಗೆ ತಿಳಿದಂತೆ ಯಾವ ಸಭೆಯೂ ಇಲ್ಲ.…
ಕ್ಷಮೆಯು ಸತ್ತವರನ್ನು ಬದುಕಿಸುವುದಿಲ್ಲ, ಪವನ್ ಕಲ್ಯಾಣ್ ಗೆ ಟಿಟಿಡಿ ಮುಖ್ಯಸ್ಥರ ತಿರುಗೇಟು!
ತಿರುಪತಿ : ತಿರುಪತಿಯಲ್ಲಿನ ಕಾಲ್ತುಳಿತ ಘಟನೆಗೆ ಕ್ಷಮೆ ಕೋರುವುದರಿಂದ ಸತ್ತವರು ಬದುಕಿ ಬರಲ್ಲ ಎಂದು ಆಂಧ್ರ ಪ್ರದೇಶದ ಮೈತ್ರಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆಯನ್ನು ತಿರುಮಲ ತಿರುಪತಿ ದೇವಸ್ಥಾನಂ ಮುಖ್ಯಸ್ಥ ಬಿ.ಆರ್. ನಾಯ್ಡು ಶುಕ್ರವಾರ ನೀಡಿದ್ದಾರೆ. ಜ.8 ರಂದು ವಿಶೇಷ…
ಅತ್ಯಾಚಾರ ಪ್ರಕರಣ; ತೆಲುಗಿನ ಯೂ ಟ್ಯೂಬರ್‌ಗೆ 20 ವರ್ಷ ಜೈಲು ಶಿಕ್ಷೆ!
ವಿಶಾಖಪಟ್ಟಣಂ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ, ತೆಲುಗು ಯೂ ಟ್ಯೂಬರ್ ಹಾಗೂ ಟಿಕ್ ಟಾಕ್ ಖ್ಯಾತಿಯ ಚಿಪ್ಪದ ಭಾರ್ಗವ್‌ಗೆ ವಿಶಾಖಪಟ್ಟಣಂನ ಪೋಕ್ಸೋ ವಿಶೇಷ ನ್ಯಾಯಾಲಯವೊಂದು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ, ಅತ್ಯಾಚಾರದಿಂದ ಗರ್ಭಿಣಿಯಾಗಿರುವ 14 ವರ್ಷದ ಅಪ್ರಾಪ್ತೆಗೆ ರೂ.…
‘ನಾನು ಕೂಡಾ ಮನುಷ್ಯ, ತಪ್ಪುಗಳು ಸಹಜ’: ಪ್ರಧಾನಿ ಹೇಳಿಕೆಗೆ ಕಾಂಗ್ರೆಸ್ ಅಣಕ!
ನವದೆಹಲಿ : ಝೆರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಅವರ ಪಾಡ್ ಕಾಸ್ಟ್ ಗೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆ ಕುರಿತು ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ಎರಡು ಗಂಟೆಗಳ ಪಾಡ್ ಕಾಸ್ಟ್ ನಲ್ಲಿ ಪ್ರಧಾನಿಯವರು ತಮ್ಮ ತಪ್ಪುಗಳು ಹಾಗೂ ಜೀವನ ಮಂತ್ರವನ್ನು ಹಂಚಿಕೊಂಡಿದ್ದರು.…
ಜನವರಿ 20 ರಿಂದ ಬಿಯರ್ ಬೆಲೆ ಹೆಚ್ಚಳ ಸಾಧ್ಯತೆ!
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ, ರಾಜ್ಯ ಸರ್ಕಾರ ಇದೀಗ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದು, ಒಂದು ವರ್ಷದಲ್ಲಿ 3ನೇ ಬಾರಿಗೆ ಬಿಯರ್ ಬೆಲೆ ಹೆಚ್ಚಳ ಮಾಡಲು ಮುಂದಾಗಿದೆ. ಪ್ರಸಕ್ತ ಆರ್ಥಿಕ…