ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪವನ್ನು ಗೃಹ ಸಚಿವ ಜಿ ಪರಮೇಶ್ವರ ಅವರು ತಿರುಗೇಟು ಕೊಟ್ಟಿದ್ದಾರೆ. ರಾಜ್ಯದಲ್ಲಿ ದರೋಡೆ ಮತ್ತು ಕೊಲೆಗಳ ಘಟನೆಗಳು ಆಗಾಗ್ಗೆ ನಡೆಯುತ್ತಿವೆ ಎಂಬ ಆರೋಪಗಳನ್ನು ತಿರಸ್ಕರಿಸಿ, ಈ ಆರೋಪಗಳು ಆಧಾರರಹಿತ ಎಂದು ಕರೆದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತುಂಬಾ ಚೆನ್ನಾಗಿದೆ. ಪದೇ ಪದೆ ದರೋಡೆ, ಕೊಲೆಗಳು ನಡೆಯುತ್ತಿವೆ ಎಂಬ ಆರೋಪ ನಿರಾಧಾರ, ಇಂತಹ ಘಟನೆಗಳು ನಡೆಯಲು ಬಿಡುವುದಿಲ್ಲ ಎಂದು ಹೇಳಿದರು.

ಮಂಗಳೂರು ನಗರದ ಉಳ್ಳಾಲ ವಲಯದ ಸಹಕಾರಿ ಬ್ಯಾಂಕ್‌ನಲ್ಲಿ ಶಸ್ತ್ರಸಜ್ಜಿತ ತಂಡವೊಂದು ಕೋಟ್ಯಂತರ ರೂ. ಮೌಲ್ಯದ ನಗದು ಮತ್ತು ಚಿನ್ನವನ್ನು ದೋಚಿದೆ. ಎರಡು ದಿನಗಳಲ್ಲಿ ಕರ್ನಾಟಕದಲ್ಲಿ ನಡೆದ ಎರಡನೇ ದೊಡ್ಡ ಬ್ಯಾಂಕ್ ದರೋಡೆ ಇದಾಗಿದೆ.

‘ಬ್ಯಾಂಕ್ ದರೋಡೆ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಸಣ್ಣಪುಟ್ಟ ಲೋಪಗಳಿಂದ ಕೆಲವು ಘಟನೆಗಳು ಸಂಭವಿಸಿವೆ. ಆದರೆ, ಇದರಿಂದ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳುವುದು ಸರಿಯಲ್ಲ. ನಾವು ಬಿಜೆಪಿ ಆಢಳಿತಾವಧಿಯಲ್ಲಿ ಸಂಭವಿಸಿದ ಘಟನೆಗಳ ಡೇಟಾವನ್ನು ಬಿಡುಗಡೆ ಮಾಡುತ್ತೇವೆ. ಬಿಜೆಪಿ ಇದೀಗ ಎಲ್ಲವನ್ನೂ ಮರೆತಂತಿದೆ’ ಎಂದು ಹೇಳಿದರು.

Leave a Reply

Your email address will not be published. Required fields are marked *