ಕಾಂಚಿಪುರಂ : ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯ ಸಿಗುವ ಭರವಸೆಯಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ತಮಿಳುನಾಡಿನ ಕಾಂಚಿಪುರಂ ವರದಾರಾಜು ಪೆರುಮಾಳ್ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಡಿ.ಕೆ. ಶಿವಕುಮಾರ್, ಈ ವೇಳೆ, 400 ಟಿಎಂಸಿಗೂ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ.
ಈ ಹೆಚ್ಚುವರಿ ನೀರನ್ನು ಸಂಗ್ರಹ ಮಾಡಿದರೆ ಕಷ್ಟಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ. ಜೊತೆಗೆ, ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮ, ನಿಮ್ಮಲ್ಲಿಯೇ ಸಮಸ್ಯೆ ಇತ್ಯರ್ಥ ಪಡಿಸಿಕೊಂಡು ಬನ್ನಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರ ಜಲಶಕ್ತಿ ಸಚಿವರು ಸಹ ಸಮಸ್ಯೆಯನ್ನು ಇತ್ಯರ್ಥಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.