ಬೆಂಗಳೂರು: ಮೂಡಾ ಹಗರಣ ವಿಚಾರವಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಮಾಹಿತಿಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಇದರ ನಡುವೆಯೇ ಪ್ರಾಸಿಕ್ಯೂಷನ್ ನನ್ನು ವಿರೋಧಿಸಿ ಸುದ್ದಿಗೋಷ್ಠಿ ವೇಳೆ ಮಾತಾಡುತ್ತಿರುವಾಗಳೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಂಘದ ಮುಖಂಡರಾದ (Congress Leader) ರವಿಚಂದ್ರನ್ ಹೃದಯಾಘಾತದಿಂದ (Heart Attack) ನಿಧನ ಹೊಂದಿದ್ದಾರೆ.
ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಿಸದೇ ನಿಧನರಾದರು
ಇಂದು ಮಧ್ಯಾಹ್ನದ ವೇಳೆಗೆ ಗವರ್ನರ್ ಪ್ರಾಸಿಕ್ಯೂಷನ್ ಅನ್ನು ವಿರೋಧಿಸಿ ಹಿಂದುಳಿದ ವರ್ಗಗಳ ಮುಖಂಡರಿಂದ ಸುದ್ದಿಗೋಷ್ಠಿ ಎರ್ಪಡಿಸಲಾಗಿತ್ತು. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಪರ ವಕಾಲತ್ತು ವಹಿಸಿ ಮಾತಾನಾಅದುತ್ತಿದ್ದು ಸುದ್ದಿಗೋಷ್ಠಿ ವೇಳೆ ಹೃದಯಾಘಾತದಿಂದ ಕಾಂಗ್ರೆಸ್ ಕಾರ್ಯಕರ್ತ, ಸಂಘದ ಸದಸ್ಯ ಸಿ.ಕೆ.ರವಿಚಂದ್ರನ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಹತ್ತಿರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಅವರು ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದರು.
ಮೃತ ಪಿ ಕೆ ರವಿಚಂದ್ರನ್ ಅವ್ರು ಚನ್ನಸಂದ್ರ ನಿವಾಸಿಯಾಗಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಂಘದ ಮುಖಂಡರಾಗಿದ್ದರು. ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವ ಕ್ರಮಕ್ಕೆ ವಿರೋಧಿಸಿ ಮಾತನಾಡುತ್ತಿದ್ದ ವೇಳೆಯೇ ಅವರಿಗೆ ಹೃದಯಾಘಾತ ಆಗಿತ್ತು