ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕುಖ್ಯಾತ ಚಡ್ಡಿಗ್ಯಾಂಗ್‌ನ ಅಂತರರಾಜ್ಯ ದರೋಡೆಕೋರನೋರ್ವನನ್ನು ಪೊಲೀಸರು ಕಾಲಿಗೆ ಗುಂಡುಹಾರಿಸಿ ಬಂಧಿಸಿದ್ದಾರೆ.
ಈ ಹಿಂದೆ ಹುಬ್ಬಳ್ಳಿ-ಧಾರವಾಡದ ನವಲೂರಿನಲ್ಲಿ ವಿಕಾಸ ಕುಮಾರ್ ಎಂಬುವವರ ಮನೆಯ ಬಾಗಿಲಿಗೆ ಕಲ್ಲಿನಿಂದ ಹೊಡೆದು ಮನೆಯೊಳಗೆ ನುಗ್ಗಿದ ಡಕಾಯಿತರ ತಂಡ ಕುಟುಂಬದ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿ ಪರಾರಿಯಾಗಿತ್ತು. ಮನೆಯಲ್ಲಿದ್ದ ದಂಪತಿಗಳ ಕೈಕಾಲು ಕಟ್ಟಿ, ಬಡಿಗೆಯಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು.
ಈ ಪ್ರಕರಣದಲ್ಲಿ ಇದೀಗ ಮಹತ್ವದ ಕಾರ್ಯಾಚರಣೆ ನಡೆಸಿ ಓರ್ವ ನಟೋರಿಯಸ್ ದರೋಡೆಕೋರನನ್ನು ಬಂಧಿಸಿದ್ದಾರೆ. 4 ರಾಜ್ಯಗಳಲ್ಲಿ 50 ಪ್ರಕರಣಗಳಲ್ಲಿ ಬೇಕಾಗಿದ್ದ ಪ್ರಮುಖ ಆರೋಪಿ ಕಾಲಿಗೆ ಗುಂಡು ಹಾರಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ರಾಯಾಪುರದ ಬಳಿ ಪೊಲೀಸರು ಎರಡು ಸುತ್ತು ಗುಂಡು ಹಾರಿಸಿ ಆರೋಪಿ ವೆಂಕಟೇಶ್ವರ ರಾವ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಪಾಲಾ ವೆಂಕಟೇಶ್ವರ ರಾವ್ ಅಲಿಯಾಸ್ ಕಲ್ಯಾಣ್‌ಕುಮಾರ್ ಆಂಧ್ರ ಪ್ರದೇಶದ ಮೂಲದವನಾಗಿದ್ದು, ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆತನ ಎರಡೂ ಕಾಲುಗಳಿಗೆ ಪಿಎಸ್ಐ ಪ್ರಮೋದ್ ಗುಂಡು ಹಾರಿಸಿದ್ದಾರೆ.
ಪೊಲೀಸರ ಮೇಲೆಯೂ ಹಲ್ಲೆಯಾಗಿದ್ದು, ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಇನ್ನೂಳಿದವರ ಬಂಧನಕ್ಕೆ ಬಲೆ ಬಿಸಿದ್ದಾರೆ.
ನವಲೂರಿನ ಮನೆ ಮೇಲೆ ದಾಳಿ ಮಾಡಿದ್ದ ಈ ನಟೋರಿಯಸ್ ಗ್ಯಾಂಗ್ ಮೊದಲು ಮನೆ ಬಾಗಿಲಿಗೆ ದೊಡ್ಡ ಸೈಜ್ ಕಲ್ಲಿನ ಮೂಲಕ ಬಾಗಿಲು ಮುರಿದಿದ್ದರು. ಬಳಿಕ ಮನೆಯೊಳಗೆ ನುಗ್ಗಿ ಮನೆಯಲ್ಲಿದ್ದ ದಂಪತಿಗಳ ಕೈಕಾಲು ಕಟ್ಟಿ, ಬಡಿಗೆಯಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಇದೀಗ ಚಡ್ಡಿ ಗ್ಯಾಂಗ್’ನ ಕರಾಳತೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅವಳಿ ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ.
ಪ್ರಸ್ತುತ ಆತನನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ನಮ್ಮ ಸಿಬ್ಬಂದಿ ಪ್ರಮೋದ್ ಮತ್ತು ಆನಂದ್ ಬಡಿಗೇರ್ ಎಂಬುವವರಿಗೂ ಗಾಯಗಳಾಗಿವೆ. ಅವರಿಗೂ ಚಿಕಿತ್ಸೆ ನಡೆಯುತ್ತಿದೆ. ಈ ಪ್ರಕರಣದ ಇತರೆ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.