ಬೆಂಗಳೂರು : ಮಾನವೀಯತೆಯನ್ನು ಮರೆತು ರಾತ್ರಿ 10 ಗಂಟೆಯವರೆಗೆ ಗರ್ಭಿಣಿ ಮಹಿಳೆಯನ್ನು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡಿರುವ ಘಟನೆ ನಡೆದಿದೆ.

ಪತಿಯೊಂದಿಗೆ ಗರ್ಭಿಣಿ ಮಹಿಳೆ ಕೆ.ಸಿ.ಜನರಲ್ ಆಸ್ಪತ್ರೆಗೆ ಇಂಜೆಕ್ಷನ್ ತೆಗೆದುಕೊಳ್ಳಲು ಬಂದಿದ್ದಳು. ಈ ವೇಳೆ ಆಧಾರ್ ಕಾರ್ಡ್ ಪರಿಶೀಲನೆ ಮಾಡಿದಾಗ ಮಹಿಳೆಯ ವಯಸ್ಸು 18 ವರ್ಷ, 20 ದಿನ ಎಂದು ಗೊತ್ತಾಗಿದೆ. ಆದರೆ ಮಹಿಳೆ ಈಗ 4 ತಿಂಗಳ ಗರ್ಭಿಣಿಯಾಗಿದ್ದು, 18 ವರ್ಷಕ್ಕೂ ಮುಂಚೆಯೇ ಮದುವೆ ಮಾಡಿರುವುದಾಗಿ ತಿಳಿದುಬಂದಿದೆ.

ಇದರಿಂದ ಕೆ.ಸಿ.ಜನರಲ್ ಆಸ್ಪತ್ರೆಯ ವೈದ್ಯರು ಶೇಷಾದ್ರಿಪುರಂ ಪೊಲೀಸರಿಗೆ ಮಾಹಿತಿ ನೀಡಿದ್ದು, ನೆನ್ನೆ ಮಧ್ಯಾಹ್ನ 2 ಗಂಟೆಗೆ ಪತಿ, ಪತ್ನಿಯನ್ನ ಪೊಲೀಸರು ಶೇಷಾದ್ರಿಪುರಂ ಠಾಣೆಗೆ ಕರೆತಂದಿದ್ದಾರೆ.

ನಿಯಮಗಳ ಪ್ರಕಾರ ಸಂಜೆ 6 ಗಂಟೆಯೊಳಗೆ ಮಹಿಳೆಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿಕೊಡಬೇಕು. ಆದರೆ ರಾತ್ರಿ 10 ಗಂಟೆವರೆಗೆ ಗರ್ಭಿಣಿಯನ್ನು ಠಾಣೆಯಲ್ಲಿಯೇ ಇರಿಸಿಕೊಂಡು ಅಮಾನವೀಯತೆ ಮೆರೆದಿದ್ದಾರೆ. ಈ ಬಳಿಕ ಠಾಣೆಯ ಬಳಿ ಮಾಧ್ಯಮದವರು ಬಂದ ನಂತರ ಮಹಿಳೆಯನ್ನು ಸಖಿ ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *