ಬೆಂಗಳೂರು : ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರನನ್ನು ಬಂಧಿಸಲಾಗಿದೆ.
ನಿಷೇಧಿತ ಪಿಎಫ್ಐ ಸದಸ್ಯನಾಗಿದ್ದ, ಅತೀಕ್ ಅಹ್ಮದ್ ಎಂಬಾತನನ್ನು ಈ ಪ್ರಕರಣದಲ್ಲಿ ಬಂಧನ ಮಾಡಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಕೇಸ್ಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 21ನೇ ಆರೋಪಿ ಅತೀಕ್. ಈತ ಮುಸ್ತಫಾ ಪೈಚಾರ್ಗೆ ಆಶ್ರಯ ನೀಡಿದ್ದ ಎನ್ನಲಾಗಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸದಸ್ಯನಾಗಿದ್ದ ಅತೀಕ್ ಪ್ರವೀಣನ ಕೊಲೆ ಬಳಿಕ ಆರೋಪಿ ಮುಸ್ತಫಾನಿಗೆ ಆಶ್ರಯ ನೀಡಿ ಸಹಾಯ ಮಾಡಿದ್ದ. ಮುಸ್ತಫಾನನ್ನು ಚೆನ್ನೈಗೆ ಕಳಿಸಿ ಪರಾರಿಯಾಗಲು ನೆರವು ನೀಡಿದ್ದ. ಹೀಗಾಗಿ, ಆತನನ್ನು ಬಂಧಿಸಲಾಗಿದೆ. ಈ ಕುರಿತು ಎನ್ಐಎಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.