ಬೆಂಗಳೂರು : ರಾಜ್ಯದಲ್ಲಿ ಪೂರ್ವ ಮುಂಗಾರು ಆಗಿದ್ದು, ಮುಂದಿನ 4-5 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದ್ದು, ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಮಧ್ಯಾಹ್ನದ ಬಳಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.
ಕರ್ನಾಟಕದಲ್ಲಿ ಬಿಸಿಲ ಬೇಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಿವಿಧೆಡೆ ನೆಲ ಕಾದ ಕುಲುಮೆಯಾಗಿದೆ. ಜಾಸ್ತಿ ಬಿಸಲಿನಿಂದಾಗಿ ಜನರು ಬೆಂಡಗಿದ್ದಾರೆ. ಹೀಗಿರುವಾಗಲೇ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ದಿಢೀರ್ ಬಂದ ಮಳೆ ತಂಪೆರೆದಿದೆ.
ಬೆಂಗಳೂರು ಸೇರಿ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ್, ಉಡುಪಿ, ದಕ್ಷಿಣ ಕನ್ನಡಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಚಿಂಚೋಳಿ, ಬೆಂಗಳೂರು, ಸೇಡಂ, ಕಮಲಾಪುರದಲ್ಲಿ ನೆನ್ನೆ ಮಳೆಯಾಗಿತ್ತು.
ಹವಾಮಾನ ಇಲಾಖೆ ಮಳೆ ಮುನ್ಸೂಚನೆ ಬೆನ್ನಲ್ಲೇ ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರಿನ ಹೆಬ್ಬಾಳ, ಮೇಖ್ರಿ ಸರ್ಕಲ್, ಭೂಪಸಂದ್ರ ಸೇರಿ ಹಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಮಳೆಯಿಂದ ವಾತಾವರಣ ತಂಪಾಗಿದ್ದು, ಉರಿ ಬಿಸಿಲಿನಿಂದ ತತ್ತರಿಸಿದ್ದ ಜನರು ನಿಟ್ಟುಸಿರು ಬಿಟ್ಟಿದ್ದಾರೆ ಎನ್ನಲಾಗಿದೆ.