ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಹೋಂಸ್ಟೇ ನಿರ್ಮಾಣಕ್ಕೆ ಮುದ್ರಾ ಲೋನ್ ವಿಸ್ತರಿಸುವುದಾಗಿ ಬಜೆಟ್ 2025ರ ಮಂಡನೆ ವೇಳೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
50 ಪ್ರವಾಸೋದ್ಯಮ ತಾಣಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಹಾಗೂ ರಾಜ್ಯಗಳ ಸಹಭಾಗಿತ್ವದಲ್ಲಿ ಟಾಪ್ 50 ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲಿದೆ. ಇದಕ್ಕಾಗಿ ಹೋಂಸ್ಟೇ ನಿರ್ಮಾಣಕ್ಕೆ ಮುದ್ರಾ ಸಾಲ ವಿಸ್ತರಿಸಲಿದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಪ್ರವಾಸೋದ್ಯಮವನ್ನು ಹೆಚ್ಚಿಸುವ ಪ್ರಯತ್ನ ನಡೆಯುತ್ತಿದೆ. ಇನ್ನೂ ಖಾಸಗಿ ವಲಯದ ಸಹಭಾಗಿತ್ವದಲ್ಲಿ ವೈದ್ಯಕೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲಾಗುವುದು. ಸರ್ಕಾರವು ಭಗವಾನ್ ಬುದ್ಧನ ಜೀವನ ಮತ್ತು ಸಮಯಕ್ಕೆ ಸಂಬಂಧಿಸಿದ ತಾಣಗಳ ಬಗ್ಗೆ ವಿಶೇಷ ಗಮನ ನೀಡಲಿದೆ ಎಂದು ಹೇಳಿದ್ದಾರೆ.