ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮಾರಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಿದೆ, ದಕ್ಷಿಣ ಒಳನಾಡಿನಲ್ಲೂ ಇಂದಿನಿಂದ ಚಳಿ ಹೆಚ್ಚಾಗಿದೆ. ವಿಜಯಪುರದಲ್ಲಿ 15 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶೃಂಗೇರಿ, ಕೋಲಾರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ.

ಹೊನ್ನಾವರದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.4 ಡಿಗ್ರಿ ಸೆಲ್ಇಸಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Leave a Reply

Your email address will not be published. Required fields are marked *