ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಅಪ್ಪಳಿಸುತ್ತಿರುವ ಪರಿಣಾಮ ತಮಿಳುನಾಡು, ಕರ್ನಾಟಕದ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಇಂದು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

ವಿಜಯನಗರ, ಶಿವಮೊಗ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಮುಂದುವರೆಯಲಿದೆ. ರಾಜ್ಯಾದ್ಯಂತ ಮೋಡಕವಿದ ವಾತಾವರಣವಿದ್ದ, ಕಾರಣ ಚಳಿಯ ಪ್ರಮಾಣ ಕಡಿಮೆಯಾಗಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ, ಹಗುರ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಕೆಲವೆಡೆ ಮಂಜು ಕವಿದ ವಾತಾವರಣವಿತ್ತು. ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್​, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Leave a Reply

Your email address will not be published. Required fields are marked *