ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಇಂದು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ.
ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಪವಿತ್ರಾಗೌಡ, ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ಕೋರ್ಟ್‌ಗೆ ಹಾಜರಾಗಲಿದ್ದಾರೆ. ಇಂದು ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ.
ಆರ್.ಆರ್. ನಗರದ ದರ್ಶನ್ ಮನೆ ಮುಂದೆ ಅಂಗರಕ್ಷಕರು ಜಮಾಯಿಸಿದ್ದು, ನಟ ದರ್ಶನ್ ಹಾಗೂ ಪವಿತ್ರಾಗೌಡ ಈಗಾಗಲೇ ಕೋರ್ಟ್‌ನತ್ತ ಸಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ, ನಟ ದರ್ಶನ್ ಸೇರಿ 17 ಆರೋಪಿಗಳು ಜೈಲು ಸೇರಿದ್ದರು. ಜಾಮೀನಿನ ಮೂಲಕ ಹೊರಬಂದಿರುವ ದರ್ಶನ ಇಂದು ಕೋರ್ಟ್ ವಿಚಾರಣೆ ಎದುರಿಸಲಿದ್ದಾರೆ.