ಬೆಂಗಳೂರು : ನಟ ದರ್ಶನ್ ಮತ್ತು ಪವಿತ್ರಾ ಗೌಡ ಇಂದು ಕೋರ್ಟ್‌ಗೆ ಹಾಜರಾಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪ ನಿಗದಿಯಾಗಲಿದೆ. ಈ ಕಾರಣಕ್ಕೆ ಖುದ್ದು ಹಾಜರಾಗಬೇಕೆಂದು ಸೂಚನೆ ಇರುವ ಕಾರಣ ಸಿಸಿಎಚ್ 57ರ ಕೋರ್ಟ್‌ಗೆ ಎಲ್ಲಾ 17 ಆರೋಪಿಗಳು ಹಾಜರಾಗಿದ್ದಾರೆ.
ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆ. 25ಕ್ಕೆ ಮುಂದೂಡಿ ಆದೇಶಿಸಿದರು. ಫೆ.25ಕ್ಕೆ ಮತ್ತೆ ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಬೇಕಿದೆ ಎಂದು ಕೋರ್ಟ್ ಆದೇಶಿಸಿದೆ.
ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್ ಡಿ. 13 ರಂದು ಜಾಮೀನು ಮಂಜೂರು ಮಾಡಿತ್ತು. ಈ ಆದೇಶದಲ್ಲಿ ಏಳು ಆರೋಪಿಗಳಿಗೆ, ಕೋರ್ಟ್ ಅನುಮತಿ ಇಲ್ಲದೇ ಬೆಂಗಳೂರು ಬಿಟ್ಟು ಹೋಗುವಂತಿಲ್ಲ ಎಂಬ ಷರತ್ತನ್ನು ವಿಧಿಸಿತ್ತು ಎನ್ನಲಾಗಿದೆ.