ತುಮಕೂರು : ತುಮಕೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ತುಮಕೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ತುಮಕೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ವಸಂತನರಸಾಪುರದಲ್ಲಿ 3 ಸಾವಿರ ಎಕರೆ ಭೂಮಿ ನೋಡಿದ್ದೇವೆ. ಸೀಬಿ ದೇವಸ್ಥಾನದ ಬಳಿ 4-5 ಸಾವಿರ ಎಕರೆ ಭೂಮಿ ಗುರುತಿಸಿದ ಪ್ರಸ್ತಾವನೆ ಸರ್ಕಾರಕ್ಕೆ ಹೋಗಿದೆ.
ತುಮಕೂರು ನಗರದ 2 ಕಡೆ ವಧಾಗಾರ ಮಾರುಕಟ್ಟೆ ನಿರ್ಮಾಣ ಆಗಲಿದೆ. ಅಮಾನಿಕೆರೆಗೆ ಗ್ಲಾಸ್ ಬ್ರಿಡ್ಜ್ ಮಾಡಲು ಉದ್ದೇಶಿಸಲಾಗಿದೆ. ಅಲ್ಲದೆ ಅಂಬೇಡ್ಕರ್ ಪುತ್ಥಳಿ ಟೌನ್ ಹಾಲ್‌ನಲ್ಲಿ ಸರ್ಕಲ್ ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದೆ. ಹಂತಹಂತವಾಗಿ ಅದನ್ನು ಭರ್ತಿ ಮಾಡುತ್ತೇವೆ ಎಂದರು.