ರಾಮನಗರ : ರಾಮನಗರ ಶಾಸಕರ ವಿರುದ್ಧ ಭೂ ಕಬಳಿಕೆ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ನೋಟಿಸ್ ಬಂದ ಮೇಲೆ ಶಾಸಕರು ದಾಖಲೆ ಕೊಡುತ್ತಾರೆ. ಲೋಕಾಯುಕ್ತ ತನಿಖೆ ಮಾಡಲಿ, ನೋಡೊಣ. ಇದಕ್ಕೆ ಸಂಬಂಧ ಪಟ್ಟ ಟ್ರಿಬಿನಲ್ ಕೂಡ ರೆಡಿಯಾಗುತ್ತದೆ ಎಂದು ಹೇಳಿದರು.
ಶ್ರೀರಾಮುಲು ಜನಾರ್ದನ ರೆಡ್ಡಿ ಫೈಟ್ ವಿಚಾರವಾಗಿ ಮಾತನಾಡಿದ ಅವರು, ಶ್ರೀರಾಮುಲು ಸಾಕಷ್ಟು ವರ್ಷಗಳಿಂದ ಕಾಂಗ್ರೆಸ್ ವಿರೋಧ ಮಾಡಿಕೊಂಡು ಬಂದವರು. ಶ್ರೀರಾಮುಲು, ಜನಾರ್ಧನ ರೆಡ್ಡಿ ಪರಸ್ಪರ ಕೆಸರು ಎರಚಿಕೊಳ್ಳುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ನಾಯಕರಿಗೆ ಕೊರತೆ ಇಲ್ಲ. ಸಿಎಂ ಕೂಡ ಯಾರನ್ನೂ ಕರೆಯುವುದಿಲ್ಲ ಎಂದಿದ್ದಾರೆ. ಆದರೆ ನಮ್ಮ ಪಕ್ಷಕ್ಕೆ ಬರುವುದಾದರೆ ಬರಬಹುದು ಎಂದರು.
ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಪ್ರತಿಕ್ರಿಯಿಸಿ, ಸಚಿವ ಸ್ಥಾನ ಎಲ್ಲರಿಗೂ ಸಿಗುವುದಿಲ್ಲ. ಆದರೆ ಆಸೆ ಇಟ್ಟುಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರನ್ನೇ ಕೇಳಿ ಎಂದು ನುಡಿದರು.