ವಾಷಿಂಗ್ಟನ್ : ಇತ್ತೀಚೆಗೆ ಮುಕ್ತಾಯಗೊಂಡ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಕಳಪೆ ಬ್ಯಾಟಿಂಗ್ನಿಂದಾಗಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಈ ನಡುವೆ ಅಮೆರಿಕದ ನೀಲಿ ತಾರೆ ಪೋರ್ನ್ ಸ್ಟಾರ್ ಕೆನ್ಡ್ರಾ ಕೇಂದ್ರ ಲಸ್ಟ್ ಹಿಟ್ಮ್ಯಾನ್ ಪರ ಬ್ಯಾಟ್ ಬೀಸಿದ್ದಾರೆ.
ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ತಮ್ಮ ಫೋಟೋ ಜೊತೆಗೆ ರೋಹಿತ್ ಶರ್ಮಾ ಅವರ ಮಾರ್ಫ್ ಮಾಡಿದ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದರೊಂದಿಗೆ ʻನೀವು ಭಾರತೀಯ ಕ್ರಿಕೆಟ್ ಲೋಕದ ಸೂಪರ್ ಸ್ಟಾರ್… ದೃಢವಾಗಿರಿ, ಸ್ಟ್ರಾಂಗ್ ಆಗಿರಿ ಎಂದು ಬರೆದುಕೊಂಡಿದ್ದಾರೆ. ಕೇಂದ್ರ ಲಸ್ಟ್ ಪ್ರತಿಕ್ರಿಯೆಗೆ ಲಕ್ಷಾಂತರ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಕಳಪೆ ಬ್ಯಾಟಿಂಗ್ ಪ್ರದರ್ಶನ ಭಾರೀ ಟೀಕೆಗೆ ಗುರಿಯಾಗಿತ್ತು. ರೋಹಿತ್ ಸಿಡ್ನಿಯಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸುತ್ತಾರೆ ಅನ್ನೋ ವದಂತಿಯಿದೆ.