ನವದೆಹಲಿ : ದೆಹಲಿಯ ಬಿಜೆಪಿ ಸರ್ಕಾರವು ಹಿಂದಿನ ಎಎಪಿ ಆಡಳಿತದ ಕಾರ್ಯಕ್ಷಮತೆಗೆ ಸಂಬಂಧಿಸಿದ 14 ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಗಳನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಲಿದೆ.
ಆಪ್ ಸರ್ಕಾರದ ಹಗರಣಗಳು, ಶೀಷ್ ಮಹಲ್, ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಸರ್ಕಾರ ವರದಿ ಮಂಡನೆ ಮಾಡಲಿದೆ. ಶೀಷ್ ಮಹಲ್ ನವೀಕರಣಕ್ಕೆ 8.62 ಕೋಟಿಗೆ ಮಂಜೂರು ಮಾಡಲಾಗಿದ್ದರೂ, ಅಂತಿಮವಾಗಿ 33.66 ಕೋಟಿ ರೂ. ಖರ್ಚು ಮಾಡಲಾಗಿತ್ತು.
ಮೊಹಲ್ಲಾ ಕ್ಲಿನಿಕ್ ಯೋಜನೆಗಳಲ್ಲಿ ಅಕ್ರಮದ ಶಂಕೆ ಇದೆ. ಈ ಬಗ್ಗೆ ಆಡಳಿತಾರೂಢ ಬಿಜೆಪಿ ಸರ್ಕಾರ ವರದಿ ಮಂಡಿಸಲಿದೆ. ಎಎಪಿ ‘ತಡೆಹಿಡಿದ’ ಸಿಎಜಿ ವರದಿಗಳಲ್ಲಿ ವಿವಿಧ ಸರ್ಕಾರಿ ಕಾರ್ಯಕ್ರಮಗಳು ಮತ್ತು ಉಪಕ್ರಮಗಳ ನಿರ್ಣಾಯಕ ಲೆಕ್ಕಪರಿಶೋಧನೆಗಳು ಮತ್ತು ಮೌಲ್ಯಮಾಪನಗಳು ಸೇರಿವೆ ಎನ್ನಲಾಗಿದೆ.
- ರಾಜ್ಯ ಹಣಕಾಸು ಲೆಕ್ಕಪರಿಶೋಧನಾ ವರದಿ (2021ರ ಮಾರ್ಚ್‌ಗೆ ಕೊನೆಗೊಂಡ ವರ್ಷಕ್ಕೆ)
- ಆದಾಯ, ಆರ್ಥಿಕ, ಸಾಮಾಜಿಕ ಮತ್ತು ಸಾಮಾನ್ಯ ವಲಯಗಳು ಮತ್ತು ಸಾರ್ವಜನಿಕ ಉದ್ದಿಮೆಗಳು (2020ರ ಮಾರ್ಚ್ 31, ಮತ್ತು 2021 ಕ್ಕೆ ಕೊನೆಗೊಂಡ ವರ್ಷಗಳಿಗೆ)
- ವಾಹನ ವಾಯು ಮಾಲಿನ್ಯ ತಡೆಗಟ್ಟುವಿಕೆ ಮತ್ತು ತಗ್ಗಿಸುವಿಕೆಯ ಕಾರ್ಯಕ್ಷಮತೆಯ ಲೆಕ್ಕಪರಿಶೋಧನೆ (2021ರ ಮಾರ್ಚ್ 31ಕ್ಕೆ ಕೊನೆಗೊಂಡ ವರ್ಷಕ್ಕೆ)
- ಆರೈಕೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳ ಕಾರ್ಯಕ್ಷಮತೆ ಲೆಕ್ಕಪರಿಶೋಧನೆ (2021ರ ಮಾರ್ಚ್ 31ಕ್ಕೆ ಕೊನೆಗೊಂಡ ವರ್ಷಕ್ಕೆ)
- ರಾಜ್ಯ ಹಣಕಾಸು ಲೆಕ್ಕಪರಿಶೋಧನಾ ವರದಿ (2022ರ ಮಾರ್ಚ್‌ಗೆ ಕೊನೆಗೊಂಡ ವರ್ಷಕ್ಕೆ)
- ಮದ್ಯ ಪೂರೈಕೆಯ ಕಾರ್ಯಕ್ಷಮತೆ ಲೆಕ್ಕಪರಿಶೋಧನೆ
- ರಾಜ್ಯ ಹಣಕಾಸು ಲೆಕ್ಕಪರಿಶೋಧನಾ ವರದಿ (2023ರ ಮಾರ್ಚ್‌ಗೆ ಕೊನೆಗೊಂಡ ವರ್ಷಕ್ಕೆ)
- ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಮತ್ತು ಆರೋಗ್ಯ ಸೇವೆಗಳ ನಿರ್ವಹಣೆಯ ಕಾರ್ಯಕ್ಷಮತೆ ಲೆಕ್ಕಪರಿಶೋಧನೆ
- ದೆಹಲಿ ಸಾರಿಗೆ ನಿಗಮದ ಕಾರ್ಯನಿರ್ವಹಣೆಯ ಕುರಿತು ಕಾರ್ಯಕ್ಷಮತೆ ಲೆಕ್ಕಪರಿಶೋಧನಾ ವರದಿಗಳು