ಚಿಕ್ಕೋಡಿ : ಮಹಾರಾಷ್ಟ್ರದಲ್ಲಿ ಶಿವಸೇನೆ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರ ಪುಂಡಾಟ ಮುಂದುವರೆದಿದೆ. ನಿನ್ನೆ ಪುಣೆಗೆ ತೆರಳಿದ್ದ ಬಸ್, ವಾಪಸ್ ಬರುವಾಗ ಮಸಿ ಬಳೆದು ಪುಂಡಾಟ ಮೆರೆದಿದ್ದಾರೆ.
ಮಹಾರಾಷ್ಟ್ರದ ಪುಣೆಯ ಸ್ವಾರಗೇಟ್‌ನಲ್ಲಿ ಕೆಎಸ್‌ಆರ್‌ಟಿಸಿ ಅಂಬಾರಿ ಬಸ್ ಮೇಲೆ ಕಪ್ಪು ಮಸಿ ಬಳಿದು ಪುಂಡಾಟಿಕೆ ಪ್ರದರ್ಶಿಸಿದ್ದಾರೆ. ಜಯ ಮಹಾರಾಷ್ಟ್ರ ಮರಾಠ ಮಾನುಸ ಎಂದು ಬರಹ ಬರೆದು ಪುಂಡಾಟ ಮೆರೆದಿದ್ದಾರೆ.
ಇನ್ನೂ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಮಹಾರಾಷ್ಟ್ರ ಸಾರಿಗೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳಿಸುವಂತೆ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ ಸರನಾಯಿ ಆದೇಶಿಸಿದ್ದಾರೆ. ಎರಡು ಕಡೆ ಪರಿಸ್ಥಿತಿ ಸರಿ ಆಗುವವರೆಗೆ ಬಸ್ ಸಂಚಾರ ಸ್ಥಗಿತ ಮಾಡುವಂತೆ ಆದೇಶ ಮಾಡಿದ್ದಾರೆ ಎಂದು ತಿಳಿದು ಬಂದಿದೆ.