ಬೆಂಗಳೂರು : ಮಲ್ಲೇಶ್ವರದ ಕಾಡು ಮಲ್ಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಸಂಭ್ರಮ ಜೋರಾಗಿದೆ. ನಸುಕಿನ ಜಾವಯಿಂದಲೇ ರುದ್ರಾಭಿಷೇಕದೊಂದಿಗೆ ಶಿವರಾತ್ರಿ ಸಂಭ್ರಮ ಆರಂಭವಾಗಿದೆ.
ಶಿವನಿಗೆ ದೇವರಿಗೆ ರುದ್ರಾಭಿಷೇಕ, ರುದ್ರ ಪಾರಾಯಣ ನೆರವೇರಲಿದೆ. ದೇವಾಲಯದಲ್ಲಿ ವಿಶೇಷ ಅಲಂಕಾರವನ್ನು ಮಾಡಲಾಗಿದ್ದು, 2,000 ಮುಸುಕಿನ ಜೋಳ ಇಪ್ಪತ್ತುವರೆ ಕಬ್ಬು ಹಾಗೂ 1,500 ಎಳನೀರಿನಿಂದ ಅಲಂಕಾರ ಮಾಡಲಾಗಿದೆ.
ಬೆಳಗ್ಗೆ 5.30ರ ವರೆಗೆ ಸೇವಾ ಚೀಟಿ ಪಡೆದಿರುವ 1,500 ಜನ ಕುಟುಂಬ ಸಮೇತರಾಗಿ ಭಾಗಿಯಾಗಿದ್ದು, ಬೆಳಗ್ಗೆ 5.30ರ ನಂತರ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅನುವು ಮಾಡಲಾಗಿದೆ. 60,000 ಜನಕ್ಕೆ ಅನ್ನಪ್ರಸಾದ ವಿತರಣೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 6.30 ರಿಂದ ಬೆಳಗಿನ ಜಾವ 2.30ರ ವರೆಗೆ ಜಾಗರಣೆ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.