ಬೆಂಗಳೂರು : 40 ಅಡಿಗಿಂತ ಕಡಿಮೆ ಅಗಲವಿರುವ ರಸ್ತೆಗಳನ್ನು ಹೊಂದಿರುವ ವಸತಿ ಪ್ರದೇಶಗಳಲ್ಲಿರುವ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳ (2015 ರ ನಂತರ ತೆರೆದ ಅಂಗಡಿಗಳು) ವ್ಯಾಪಾರ ಪರವಾನಗಿಗಳನ್ನು ಇನ್ನು ಮುಂದೆ ನವೀಕರಿಸಲಾಗುವುದಿಲ್ಲ ಎಂದು ಬಿಬಿಎಂಪಿ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಫೆ.28ರ ಒಳಗಡೆ 2025-26ನೇ ಹಣಕಾಸು ವರ್ಷದ ವ್ಯಾಪಾರ ಪರವಾನಗಿಗಳ ನವೀಕರಣ ಮಾಡಬೇಕೆಂದು ಬಿಬಿಎಂಪಿ ಸೂಚಿಸಿದೆ. ಉದ್ದಿಮೆದಾರರ ಅನುಕೂಲಕ್ಕೆ ತಕ್ಕಂತೆ 1 ರಿಂದ 5 ಆರ್ಥಿಕ ವರ್ಷಗಳ ಅವಧಿಗೆ ನವೀಕರಣ ಮಾಡಬಹುದಾಗಿದೆ.

ನವೀಕರಣ ಶುಲ್ಕವನ್ನು ಉದ್ದಿಮೆದಾರರು ಕೋರುವ ಆರ್ಥಿಕ ವರ್ಷಕ್ಕೆ ಮಿತಿಗೊಳಿಸಿ ಪಾವತಿಸಿಕೊಳ್ಳುವಂತೆ ಸೂಚಿಸಲಾಗಿದೆ. ಕಳೆದ ಸಾಲಿನಂತೆ ಉದ್ದಿಮೆ ಪರವಾನಿಗೆ ಶುಲ್ಕವನ್ನು ಆನ್‌ಲೈನ್ ಮುಖಾಂತರ ಮಾಡಬೇಕು. ಫೆ.1 ರಿಂದ ಫೆ. 28ರ ವರೆಗೆ ದಂಡವಿಲ್ಲದೇ ಪರವಾನಿಗೆ ಶುಲ್ಕವನ್ನು ಪಾವತಿಸಬಹುದು ಎಂದು ಬಿಬಿಎಂಪಿ ತಿಳಿಸಿದೆ.

Leave a Reply

Your email address will not be published. Required fields are marked *