ಬೆಳಗಾವಿ : ಇಲ್ಲಿನ ಹೊರವಲಯದ ನಾವಗೆ ಗ್ರಾಮದಲ್ಲಿರುವ ಸ್ನೇಹಂ ಕಾರ್ಖಾನೆಯಲ್ಲಿ ನಿನ್ನೆ ರಾತ್ರಿವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು ಜನ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದ್ದು ಇಡೀ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಘಟನಾಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಅರಸಹಾಸ ಪಟ್ಟು ಕೆಲ ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಸ್ನೇಹಂ ಕಾರ್ಖಾನೆಯಲ್ಲಿ ಎಷ್ಟು ಜನ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿಲ್ಲ ಅಂತ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದು, ಇನ್ನು ಘಟನಟಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಕಿಯ ಅನಾಹುತಕ್ಕೆ ಎಷ್ಟು ಜನ ಸಿಲುಕೊಕೊಂಡಿದ್ದಾರೆ, ಸಾವು ನೋವುಗಳ ಮಾಗಿತಿ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ನೀಡಲಿದ್ದಾರೆ.