ಬೆಂಗಳೂರು : ಹುಕ್ಕೇರಿಯ ಇಂಗಳಿಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರನ್ನು ಥಳಿಸಿದವರ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳೋದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾತಾಡಿದ ಜಿ. ಪರಮೇಶ್ವರ್, ಯಾರೂ ಕಾನೂನು ಕೈಗೆ ತಗೋಬಾರದು. ಕಾನೂನು ಬಾಹಿರ ಚಟುವಟಿಕೆ ಕಂಡು ಬಂದರೆ ಪೊಲೀಸರಿಗೆ ತಿಳಿಸಲಿ. ಪೊಲೀಸರ ಕೆಲಸವೇ ಕಾನೂನು ಕಾಪಾಡೋದು. ಅದು ಬಿಟ್ಟು ಇವರು ಯಾಕೆ ಆ ಕೆಲಸ ಮಾಡೋಕ್ಕೆ ಹೋಗಿದ್ರು? ಅಂತ ಶ್ರೀರಾಮಸೇನೆ ಕಾರ್ಯಕರ್ತರ ನಡೆಯನ್ನು ಪ್ರಶ್ನಿಸಿದರು.
ನೈತಿಕ ಪೊಲೀಸ್ ಗಿರಿ ಮಾಡಬಾರದು, ದ್ವೇಷ ಭಾಷಣ, ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಸರಿಯಲ್ಲ. ಅಂತಹ ಪ್ರಕರಣಗಳನ್ನು ಪೊಲೀಸರು ಇದ್ದಾರೆ, ನೋಡುತ್ತಿದ್ದಾರೆ. ಶಿವಮೊಗ್ಗದಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ಯಾರು ಕೃತ್ಯ ಎಸಗಿದ್ದಾರೋ ಅವರ ಮೇಲೆ ಸೂಮೋಟೋ ಕೇಸ್ ದಾಖಲಿಸಿ ಕ್ರಮ ತಗೋತಾರೆ ಅಂದರು.
ದತ್ತಾತ್ರೇಯ ಹೊಸಬಾಳೆ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ಕೊಟ್ಟ ವಿಚಾರ ಬಗ್ಗೆ ಮಾತಾಡಿ, ಪೊಲೀಸರು ದೂರಿನ ಬಗ್ಗೆ ಪರಿಶೀಲಿಸಿ ಕ್ರಮ ತಗೋತಾರೆ. ಹೇಳಿಕೆ ಕಾನೂನು ವಿರೋಧಿ ಇದೆಯಾ? ಎಫ್ಐಆರ್ ಮಾಡಬೇಕಾ ಅಂತ ಪೊಲೀಸರು ಪರಿಶೀಲಿಸಿ ಕ್ರಮ ತಗೋತಾರೆ. ಕಾನೂನು ಬಾಹಿರ ಅನಿಸಿದರೆ ಎಫ್ಐಆರ್ ಮಾಡುತ್ತಾರೆ ಎಂದರು.