ಬೆಂಗಳೂರು : ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಮಧ್ಯೆ ನಡೆಯುತ್ತಿರುವ ಕಿತ್ತಾಟಕ್ಕೆ ಈಗ ಡಿಕೆ ಶಿವಕುಮಾರ್ ಹೆಸರು ಎಂಟ್ರಿಯಾಗಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜನಾರ್ದನ ರೆಡ್ಡಿ, ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿಯನ್ನು ಮಣಿಸಲು ಹೇಗಾದರೂ ಮಾಡಿ ಶ್ರೀರಾಮುಲು ಅವರನ್ನು ಪಕ್ಷಕ್ಕೆ ಕರೆದುಕೊಳ್ಳುವ ಸಂಬಂಧ ಮಾತುಕತೆ ನಡೆಸುತ್ತಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ್ದ, ಶ್ರೀರಾಮುಲು ನಾನು ಪಕ್ಷ ಬಿಡಲು ಸಿದ್ಧ ಎಂದು ಹೇಳಿದ್ದರು. ಈಗ ಜನಾರ್ದನ ರೆಡ್ಡಿ ಬಾಂಬ್ ಸಿಡಿಸುವ ಮೂಲಕ ಶ್ರೀರಾಮಲು ಕಾಂಗ್ರೆಸ್ ಹೋಗುವ ಸುಳಿವನ್ನು ನೀಡಿದ್ದಾರೆ.
ಶ್ರೀರಾಮುಲು ಪಕ್ಷ ಬಿಡುವುದು ಅವರ ವೈಯಕ್ತಿಕ ವಿಚಾರ. ಹೋಗುವುದಾದರೆ ಅವರು ಹೋಗಲಿ. ಪಕ್ಷ ಬಿಟ್ಟು ಹೋಗುವಾಗ ನನ್ನ ಮೇಲೆ ಆರೋಪ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿ ತಿರುಗೇಟು ನೀಡಿದರು.
ಜನಾರ್ದನ ರೆಡ್ಡಿ ಹೇಳುವಂತೆ ಶ್ರೀರಾಮುಲು ಕಾಂಗ್ರೆಸ್‌ಗೆ ಹೋಗುತ್ತಾರಾ? ಕಾಂಗ್ರೆಸ್‌ನಲ್ಲಿ ಸತೀಶ್ ಜಾರಕಿಹೊಳಿ ಪರ್ಯಾಯವಾಗಿ ಶ್ರೀರಾಮುಲು ಬೆಳೆಸಲು ಡಿಕೆಶಿ ಸಂಚು ರೂಪಿಸಿದ್ದಾರಾ ಎಂಬ ಪ್ರಶ್ನೆಗೆ ಡಿಕೆ ಶಿವಕುಮಾರ್ ಮತ್ತು ಶ್ರೀರಾಮುಲು ಈಗ ಉತ್ತರ ನೀಡಬೇಕಿದೆ.