ಕೆ.ಆರ್.ಪೇಟೆ: ಭೀಮನ ಅಮವಾಸ್ಯೆ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿರುವ ಪವಾಡ ಪುರುಷ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರ ಶ್ರೀಆವರಣದಲ್ಲಿ ವಿವಿಧ ಬಗೆಯ ಫಲ ಪುಷ್ಪಗಳು ಹಾಗೂ ವಿಶೇಷವಾಗಿ ಒಬ್ಬಟ್ಟು ಅಲಂಕಾರದ ಮೂಲಕ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು
ಭೀಮನ ಅಮಾವಾಸ್ಯೆ ಪ್ರಯುಕ್ತ ಶನಿವಾರ ಎಣ್ಣೆ ಮಜ್ಜನ ಸೇವೆ ಸಂಪ್ರದಾಯದಂತೆ ವಿಶೇಷ ಪೂಜೆ ನೆರವೇರಿತು.
ದೇವರಿಗೆ ಮಾಡಿದ್ದ ಅಲಂಕಾರವು ಬಹಳ ವಿಶೇಷವಾಗಿ ಕಂಗೊಳಿಸುತ್ತಿತ್ತು ..
ಗವಿಮಠದ ಶ್ರೀ ಸ್ವತಂತ್ರ ಸಿದ್ದಲಿಂಗೇಶ್ವರ ಪೀಠಾಧ್ಯಕ್ಷರಾದ ಶ್ರೀ ಚನ್ನವೀರ ಮಹಾಸ್ವಾಮಿಗಳ ನೇತೃತ್ವದಲ್ಲಿ ಭೀಮನ ಅಮಾವಾಸ್ಯೆಯ ಪ್ರಯುಕ್ತ ಮುಂಜಾನೆಯಿಂದಲೇ ಹಾಲಿನ, ಅಭಿಷೇಕ, ಬಿಲ್ವಪತ್ರೆ , ಪಂಚಾಮೃತ ಅಭಿಷೇಕ ವಿಜೃಂಭಣೆಯಿಂದ ನೆರವೇರಿತು ಸ್ವಾಮಿಗೆ ನೈವೇದ್ಯ ಅರ್ಪಿಸಿದ ನಂತರ ಮಹಾ ಮಂಗಳಾರತಿ ನೆರವೇರಿತು.