ಗುವಾಹಟಿ : ಬಿಜೆಪಿ, ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ ನೀಡಿದ್ದ, ಹಿನ್ನೆಲೆ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಗುವಾಹಟಿಯ ಪಾನ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಗುವಾಹಟಿ ಮೂಲದ ವಕೀಲ ಮೊಂಜಿತ್ ಚೇಟಿಯಾ ದೂರು ನೀಡಿದ್ದರು. ಆ ನಿಟ್ಟಿನಲ್ಲಿ ದೇಶದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಕೃತ್ಯಗಳ ಆರೋಪದ ಮೇಲೆ ಸೆಕ್ಷನ್ 152 ಮತ್ತು 197 (1)ಡಿ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಬಿಜೆಪಿ ಮತ್ತು ಆರ್‌ಎಸ್‌ಎಸ್ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ. ನಾವು ಈಗ ಬಿಜೆಪಿ, ಆರ್‌ಎಸ್‌ಎಸ್ ವಿರುದ್ಧ ಹೋರಾಡುತ್ತಿದ್ದೇವೆ ಎಂದು ಕಾಂಗ್ರೆಸ್ ಕಚೇರಿ ಉದ್ಘಾಟನೆ ವೇಳೆ ರಾಹುಲ್ ಗಾಂಧಿ ಹೇಳಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ರಾಹುಲ್ ಗಾಂಧಿ ಈ ಹೇಳಿಕೆಯೂ ಅಪಾಯಕಾರಿ, ಅಶಾಂತಿಗೆ ಕಾರಣವಾಗಬಹುದು. ಪ್ರತ್ಯೇಕತಾವಾದಿ ಭಾವನೆಗಳನ್ನು ಉತ್ತೇಜಿಸಬಹುದು. ಸಾರ್ವಜನಿಕರನ್ನು ದಂಗೆ ಪ್ರಚೋದಿಸಬಹುದು ಎಂದು ವಕೀಲ ಮೊಂಜಿತ್ ಚೇಟಿಯಾ ದೂರಿನಲ್ಲಿ ಆರೋಪಿಸಿದ್ದಾರೆ ಎನ್ನಲಾಗಿದೆ.