Tag: congress

ಮಾಜಿ ಸಂಸದ ಎಲ್​ಆರ್ ಶಿವರಾಮೇಗೌಡ ಕಾಂಗ್ರೆಸ್​ ಸೇರ್ಪಡೆ!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಾಜಿ ಸಂಸದ, ಮಾಜಿ ಶಾಸಕ ಎಲ್​.ಆರ್​.ಶಿವರಾಮೇಗೌಡ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಮಾಜಿ ಸಂಸದ ಶಿವರಾಮೇಗೌಡ ಮತ್ತು ಪುತ್ರ ಮಂಜೇಗೌಡ, ಬ್ರಿಜೇಶ್ ಕಾಳಪ್ಪ ಮತ್ತು…

ಕುರ್ಚಿ ಫೈಟ್‍ನಿಂದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ; ಜಗದೀಶ್ ಶೆಟ್ಟರ್

ಹುಬ್ಬಳ್ಳಿ : ಸಿಎಂ ಕುರ್ಚಿಗಾಗಿ ಕಾಂಗ್ರೆಸ್‍ನಲ್ಲಿ ಫೈಟ್ ಆಗುತ್ತಿದ್ದು, ಇದೇ ಕಾರಣಕ್ಕೆ ಈ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಈ ವೇಳೆ ಕಾಂಗ್ರೆಸ್ ಸರ್ಕಾರ ಆಸ್ತಿತ್ವಕ್ಕೆ ಬಂದಾಗಲೇ ಸಿಎಂ ಆಯ್ಕೆಯ…

ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಶ್ಲಾಘನೆ!

ಬೆಂಗಳೂರು : ಅಮೆರಿಕದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ವ್ಯಾಪಾರ, ರಕ್ಷಣಾ ವಲಯ, ಕೈಗಾರಿಕೆ, ಅಕ್ರಮ ವಲಸೆ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಶಶಿ ತರೂರ್…

ಕಾಂಗ್ರೆಸ್ ಸರ್ಕಾರದಲ್ಲಿ ಮಹಾ ಕುಂಭಮೇಳಕ್ಕೆ ಹೋಗಲು ಶಾಸಕರಿಗೆ ಆಸಕ್ತಿ ಹೆಚ್ಚು..!

ಬೆಂಗಳೂರು : ಕಾಂಗ್ರೆಸ್ ಸರ್ಕಾರದಲ್ಲಿ ಮಹಾ ಕುಂಭಮೇಳಕ್ಕೆ ಹೋಗಲು ಶಾಸಕರಿಗೆ ಆಸಕ್ತಿ ಹೆಚ್ಚಿದಂತಿದ್ದು, ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಸ್ನಾನ ಮಾಡುವುದರಿಂದ ಬಡತನ ನಿರ್ಮೂಲನೆ ಆಗುತ್ತಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ಹೊರಹಾಕಿದ್ದರು. ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಲು ಸರ್ಕಾರಿ ಹಣ…

ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರವನ್ನು ಏಕಾಏಕಿ ದುಪ್ಪಟ್ಟು ಹೆಚ್ಚು ಮಾಡಿದ್ದು, ಇದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ದರ ಏರಿಕೆಯಿಂದಾಗಿ ಜನ ರೊಚ್ಚಿಗೆದ್ದಿದ್ದು, ಇಷ್ಟೊಂದು ಹೆಚ್ಚಳ ಮಾಡಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಮೆಟ್ರೋ ದರ…

Invest Karnataka Summit; ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಗೈರು

ನವದೆಹಲಿ : ಸಂಸತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆ ಹಿನ್ನೆಲೆಯಲ್ಲಿ ಬುಧವಾರದಿಂದ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ (ಇನ್ವೆಸ್ಟ್ ಕರ್ನಾಟಕ 2025) ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸುತ್ತಿಲ್ಲ ಎಂದು…

ಅಶೋಕ್ ವಿಪಕ್ಷ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್ ವಿರುದ್ಧ ಆರೋಪ; ಲಕ್ಷ್ಮಣ ಸವದಿ

ಬೆಂಗಳೂರು : ವಿಪಕ್ಷ ನಾಯಕ ಆರ್.ಅಶೋಕ್ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ವಿರುದ್ಧ ನಿತ್ಯ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವಾಗ್ದಾಳಿ ನಡೆಸಿದ್ದಾರೆ. ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗುತ್ತಾರೆ ಎಂಬ ಅಶೋಕ್ ಹೇಳಿಕೆ ವಿಚಾರಕ್ಕೆ…

ಕಾಂಗ್ರೆಸ್ಸಿಗೂ ನರಕಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖರ್ಗೆಗೆ ಯಶ್‌ಪಾಲ್ ತಿರುಗೇಟು

ಉಡುಪಿ : ಕಾಂಗ್ರೆಸ್ಸಿಗೂ ನರಕಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ದೇಶ ವಿರೋಧಿ ಹಾಗೂ ಹಿಂದೂ ವಿರೋಧಿಗಳಿಗೆ ಸ್ವರ್ಗ ಇಲ್ಲ ಎಂದು ಮಲ್ಲಿಕಾರ್ಜುನ್ ಖರ್ಗೆಗೆ ಶಾಸಕ ಯಶ್‌ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ. ಕುಂಭಮೇಳದಲ್ಲಿ ಸ್ನಾನ ಮಾಡಿದರೆ ದೇಶದ ಬಡತನ ನೀಗುವುದಿಲ್ಲ ಎಂಬ ಖರ್ಗೆ…

ಶ್ರೀರಾಮುಲು ಕಾಂಗ್ರೆಸ್‌ಗೆ ಬಂದರೆ ಸ್ವಾಗತ: ಚಲುವರಾಯಸ್ವಾಮಿ

ಮೈಸೂರು : ಮಾಜಿ ಸಚಿವ, ಬಿಜೆಪಿ ನಾಯಕ ಬಿ.ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಬರಲು ನಿರ್ಧರಿಸಿದರೆ ಸ್ವಾಗತ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ಸಿದ್ಧಾಂತವನ್ನು ಒಪ್ಪುವ ಎಲ್ಲರಿಗೂ ಸ್ವಾಗತವಿದೆ. ಆದರೂ ಪಕ್ಷದ ಹೈಕಮಾಂಡ್,…

ಶ್ರೀರಾಮುಲು ಕಾಂಗ್ರೆಸ್‌ಗೆ ಬಂದರೆ ಸ್ವಾಗತ : ಸತೀಶ್ ಜಾರಕಿಹೊಳಿ

ಚಿಕ್ಕೋಡಿ : ಶ್ರೀರಾಮುಲು ಪಕ್ಷದ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ ಬಳಿಕ ಮಾತನಾಡಿದ ಅವರು, ಶ್ರೀರಾಮುಲು ಪಕ್ಷಕ್ಕೆ ಬರಲು ನನ್ನ ವಿರೋಧವಿಲ್ಲ.…