ಬೆಂಗಳೂರು : ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣ ಸಂಬಂಧ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿಯಲ್ಲ ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, ಸಿಟಿ ರವಿ ಅವರನ್ನು ಬಂಧಿಸಲಾಯಿತು ಮತ್ತು ರಾತ್ರಿಯಿಡೀ ಊಟ-ನೀರು ನೀಡದೆ ಅಲ್ಲಿಂದಿಲ್ಲಿಗೆ ಓಡಾಡಿಸಲಾಗಿದೆ. ಅವರನ್ನು ಭಯೋತ್ಪಾದಕನಂತೆ ನಡೆಸಿಕೊಳ್ಳಲಾಯಿತು ಎಂದು ದೂರಿದರು.

ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್, ಬಸವರಾಜ ಬೊಮ್ಮಾಯಿ ಮತ್ತು ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಸಿಟಿ ರವಿ ಅವರನ್ನು ನಡೆಸಿಕೊಂಡ ರೀತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದೇವೆ. ಈ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದೇವೆ ಎಂದರು.

Leave a Reply

Your email address will not be published. Required fields are marked *