ಆ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮೋಡಗಳು ದಟ್ಟೈಸಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೆರೆಡು ದಿನ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ, . ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಬಹುದು. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.