ಬೆಂಗಳೂರು : ರಾಜ್ಯ ಔಷಧ ನಿಯಂತ್ರಣ ಇಲಾಖೆ ನಡೆಸಿದ ಪರೀಕ್ಷೆಯಲ್ಲಿ 400 ಔಷಧಿಗಳ ಗುಣಮಟ್ಟ ಕಳಪೆ ಎಂಬುದು ಬಹಿರಂಗವಾಗಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಔಷಧಿಗಳ ಗುಣಮಟ್ಟ ಪರೀಕ್ಷೆ ಮಾಡಲಾಗಿತ್ತು. ರಾಜ್ಯದ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು ಮತ್ತು ಕ್ಲಿನಿಕ್‌ಗಳಲ್ಲಿ ಬಳಸುವ ಔಷಧಿಗಳ ಗುಣಮಟ್ಟ ಪರೀಕ್ಷಿಸಲಾಗಿತ್ತು.

2023-24ನೇ ಸಾಲಿನಲ್ಲಿ 7,420 ಔಷಧಿಗಳ ಮಾದರಿಗಳನ್ನ ಪರೀಕ್ಷೆಗೆ ಒಳಪಡಿಸಲಾಗಿದೆ. 285 ಔಷಧಿಗಳು ಪ್ರಮಾಣಿತ ಗುಣಮಟ್ಟ ಇಲ್ಲ ಅಂತಾ ವರದಿಯಲ್ಲಿ ತಿಳಿಸಲಾಗಿದೆ. 2024-25ನೇ ಸಾಲಿನಲ್ಲಿ 3,636 ಔಷಧಿಗಳ ಪರೀಕ್ಷೆಗೆ ಒಳಪಡಿಸಲಾಗಿದೆ.

ಅದರಲ್ಲಿ 177 ಔಷಧಿಗಳು ಪ್ರಮಾಣಿತ ಗುಣಮಟ್ಟ ಇಲ್ಲ ಅಂತಾ ವರದಿ ಬಂದಿದೆ. ಔಷಧಿಗಳನ್ನ ಮಾರುಕಟ್ಟೆಗೆ ಸರಬರಾಜು ಮಾಡುವ ಮುನ್ನ ಕಂಪನಿಗಳು ಪ್ರಮಾಣಿತ ಗುಣಮಟ್ಟ ಪರೀಕ್ಷೆ ಮಾಡಿಸಬೇಕು. ಆದರೆ, ಕೆಲ ಕಂಪನಿಗಳು ಪರೀಕ್ಷೆಗೆ ಒಳಪಡಿಸದೇ ನಿರ್ಲಕ್ಷ್ಯ ತೋರಿವೆ. ಔಷಧದ ಪ್ರಮಾಣಿತ ಗುಣಮಟ್ಟ ಹೊಂದಿರದ ಕಂಪನಿಗಳ ವಿರುದ್ಧ ಕ್ರಮಕ್ಕೆ ಚಿಂತನೆ ನಡೆಸಲಾಗಿದೆ.

Leave a Reply

Your email address will not be published. Required fields are marked *