ಯಾದಗಿರಿ: ವಡಿಗೇರಾ ತಾಲೂಕಿನ ಬಿಳ್ಹಾರ ಗ್ರಾಮದ ಸರಕಾರಿ ಪ್ರೌಢ ಶಾಲೆ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ, ಈ ರಸ್ತೆಗೆ ಬರುವ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ರಸ್ತೆ ತುಂಬೆಲ್ಲಾ ಮಳೆ ನೀರು ತುಂಬಿಕೊಂಡು ತಿರುಗಾಡದ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವೊಂದು ಬಾರಿ ತಗ್ಗಿನ ಆಳ ಅರಿಯದೇ ಕೆಲವರು ಆಯತಪ್ಪಿ ಕೂಡ ನೆಲಕ್ಕೆ ಬಿದ್ದಿದ್ದಾರೆ.
ಈ ರಸ್ತೆ ಮೇಲೆ ನೂರಾರು ವಾಹನಗಳು ನಿತ್ಯ ಸಂಚರಿಸುತ್ತವೆ. ಗ್ರಾಮಸ್ಥರು ತಮ್ಮ ದೈನಂದಿನ ಕಾರ್ಯ ಚಟುವಟಿಕೆಗಳಿಗಾಗಿ ಸಂಚರಿಸಲು ಇದೇ ರಸ್ತೆ ಮೂಲಕ ಹೊಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಪ್ರದೇಶದ ರಸ್ತೆ ಸುಧಾರಣೆಗೆ ರಾಜ್ಯ ಸರಕಾರ ಸಾಕಷ್ಟು ಅನುದಾನ ನೀಡುತ್ತಿದ್ದರೂ ಸಹ ಇಲ್ಲಿನ ಗ್ರಾಮ ಪಂಚಾಯತ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ.ಈಗಾಗಲೇ ಶಾಲೆಯ ಮುಖ್ಯ ಗುರುಗಳು ಪಂಚಾಯತಿಗೆ ಹಾಗೂ ತಾಲುಕ ಪಂಚಾಯತಿಗೆ ಲಿಖಿತ ಮನವಿ ಸಲ್ಲಿಸಿದರೂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿರುವುದಿಲ್ಲಾ ಎಂದು ಶಾಲಾ ಆಡಳಿತ ಮಂಡಳಿ ಆರೋಪಿಸಿದೆ.
ಈ ಕೂಡಲೇ ಶಾಲೆಯ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಆದಷ್ಟು ಬೇಗ ಈ ರಸ್ತೆ ನಿರ್ಮಾಣ ಮಾಡಿ ಸಾರ್ವಜನಕರಿಗೆ ಮುಕ್ತ ಸಂಚಾರ ಮಾಡಲು ಅನುಕೂಲ ಮಾಡಿಕೊಡಬೇಕೆಂದು ಮೇಲಾಧಿಕಾರಿಗಳಿಗೆ ಪತ್ರಕೆಯ ಮೂಲಕ ಶಾಲಾ ಸಿಬ್ಬಂದಿಗಳು ಮನವಿ ಮಾಡಿಕೊಂಡರು