ತುಮಕೂರು : ಕಾರ್ಮಿಕರು ತೆರಳುತಿದ್ದ 407 ವಾಹನ ಪಲ್ಟಿಯಾಗಿ, 10ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡ ಘಟನೆ ಪಾವಗಡ ತಾಲೂಕಿನ ಬುಗುಡೂರು ಗ್ರಾಮದಲ್ಲಿ ನಡೆದಿದೆ.
ನೆನ್ನೆ ರಾತ್ರಿ ಗ್ರಾಮದ ಬಳಿ ಇರುವ ತಿರುವಿನಲ್ಲಿ ಅಪಘಾತ ನಡೆದಿದೆ. ಈ ಗಾಯಾಳುಗಳು ಬಿ.ಹೊಸಳ್ಳಿ ಗ್ರಾಮದ ಲಂಬಾಣಿ ತಾಣದ ಕಾರ್ಮಿಕರು, ಅವರು ತಿರುಮಣಿ ಗ್ರಾಮದಲ್ಲಿ ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ವಾಪಸ್ಸಾಗುತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ.
ಗಾಯಾಳುಗಳಿಗೆ ತುಮಕೂರು ಜಿಲ್ಲಾಸ್ಪತ್ರೆ ಹಾಗೂ ಪಾವಗಡ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ತಿರುಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.