ಬೆಂಗಳೂರು : ಕೆಆರ್‌ಎಸ್ ಮತ್ತು ಕಬಿನಿಯಲ್ಲಿ ಸಾಕಷ್ಟು ನೀರಿದ್ದು, ಈ ಬಾರಿಯ ಬೇಸಿಗೆಯಲ್ಲಿ ಬೆಂಗಳೂರು ಮತ್ತು ಮೈಸೂರಿನಲ್ಲಿ ನೀರಿನ ಕೊರತೆ ಎದುರಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಸಮಾಜ ಕಲ್ಯಾಣ ಸಚಿವ ಎಚ್‌ಸಿ ಮಹದೇವಪ್ಪ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯ ವೇಳೆ ಮಾತನಾಡಿದ ಕಬಿನಿ ಮತ್ತು ಕೆಆರ್‌ಎಸ್‌ನಲ್ಲಿ ಸಾಕಷ್ಟು ನೀರು ಇರುವುದರಿಂದ ಈ ಬಾರಿ ನೀರಿನ ಕೊರತೆ ಎದುರಾಗುವುದಿಲ್ಲ ಎಂದು ಹೇಳಿದರು.

ಇದೇ ವೇಳೆ ಅಧಿಕಾರಿಗಳಿಗೆ ಸಚಿವರು ಕೆಲ ಸೂಚನೆಗಳನ್ನು ನೀಡಿದರು. ನೀರು ಸರಬರಾಜು ಸಮಸ್ಯೆಗಳಿರುವ ಗ್ರಾಮಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಿ, ಜಾನುವಾರು ಮೇವುಗಳ ಕೊರತೆ ಉಂಟಾಗದಂತೆ ಈಗಲೇ ಅಗತ್ಯ ಕ್ರಮಗಳನ್ನು ಅನುಸರಿಸಿ. ಕಳೆದ ಬಾರಿ ಉತ್ತಮ ಮಳೆಯಾಗಿರುವುದರಿಂದ ಜಿಲ್ಲೆಯ ಜಲಾಶಯಗಳಲ್ಲಿ ಅಗತ್ಯ ಪ್ರಮಾಣದ ನೀರು ಲಭ್ಯವಿದೆ ಸಮರ್ಪಕವಾದ ನೀರು ಪೂರೈಕೆ ನಿರ್ವಹಣೆಯಾಗಬೇಕು.

ಬೇಸಿಗೆಯಲ್ಲಿ ಶುದ್ಧವಾದ ಕುಡಿಯುವ ನೀರು ದೊರೆಯುವಂತೆ ನೋಡಿಕೊಳ್ಳಬೇಕು. ನೀರಿನ ಕೊರತೆ ಕುರಿತು ಯಾವುದೇ ದೂರುಗಳು ಬರದಂತೆ ಎಚ್ಚರಿಕೆಯಿಂದ ಕೆಲಸ ಮಾಡಿ. ಬೇಸಿಗೆಯಲ್ಲಿ ಹರಡುವ ಸಾಂಕ್ರಾಮಿಕ ಖಾಯಿಲೆಗಳ ಬಗ್ಗೆಯೂ ಮುಂಜಾಗ್ರತ ಕ್ರಮ ಅನುಸರಿಸಬೇಕಿದೆ, ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸಗಳನ್ನು ಮಾಡಬೇಕು. ಸಭೆಯಲ್ಲಿ ಎಂದು ನೀರಾವರಿ ಅಧಿಕಾರಿಗಳು ಸಚಿವರಿಗೆ ತಿಳಿಸಿದರು. ಅಲ್ಲದೆ, ಮೇ ತಿಂಗಳವರೆಗೆ ಕಬಿನಿ ಮತ್ತು ಕೆಆರ್‌ಎಸ್ ಅಚ್ಚುಕಟ್ಟು ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *