ಕಾಲಿವುಡ್‌ನ ಸ್ಟಾರ್ ನಟ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದಲ್ಲಿ ತಮಿಳಿನ ಖ್ಯಾತ ನಿರ್ದೇಶಕರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾದ ಸುದ್ದಿಯೊಂದು ಚರ್ಚೆಗೆ ಗ್ರಾಸವಾಗಿದೆ.
‘ಜನ ನಾಯಗನ್’ ಸಿನಿಮಾದಲ್ಲಿ ಲೋಕೇಶ್ ಕನಕರಾಜ್, ನೆಲ್ಸನ್ ದಿಲೀಪ್ ಕುಮಾರ್, ‘ಜವಾನ್’ ಡೈರೆಕ್ಟರ್ ಅಟ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ವಿಶೇಷ ಗೀತೆಯೊಂದರಲ್ಲಿ ಈ ಮೂರು ಮಂದಿ ಸ್ಟಾರ್ ನಿರ್ದೇಶಕರು ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ.
ವಿಜಯ್ ಆಪ್ತರಾಗಿರುವ ಈ ನಿರ್ದೇಶಕರು ನಟನ ಕೊನೆಯ ಚಿತ್ರಕ್ಕೆ ಸಾಥ್ ನೀಡುತ್ತಿದ್ದಾರೆ. ಕೆವಿಎನ್ ಸಂಸ್ಥೆ ನಿರ್ಮಾಣದ ಈ ಚಿತ್ರಕ್ಕೆ ಹೆಚ್. ವಿನೋದ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಕರಾವಳಿ ಬೆಡಗಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಮೂಲಕ ವಿಜಯ್‌ಗೆ 2ನೇ ಬಾರಿ ಜೋಡಿಯಾಗಿ ನಟಿಸುತ್ತಿದ್ದಾರೆ. 2026ರಲ್ಲಿ ಚಿತ್ರ ರಿಲೀಸ್ ಆಗಲಿದೆ.