ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರೋಹಿತ್, ಸುಚಿತ್ ಮತ್ತು ಹರ್ಷ ಎಂಬ ಮೂವರು ಬಿಎಸ್ಸಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತ ಸಂಭವಿಸಿದಾಗ ಮೂವರು ಲಾಂಗ್ ಡ್ರೈವ್ ಹೋಗಿದ್ದರು. ವರದಿಗಳ ಪ್ರಕಾರ, ಘಟನೆಯನ್ನು ಹಿಟ್ ಅಂಡ್ ರನ್ ಕೇಸ್ ಎಂದು ಪರಿಗಣಿಸಲಾಗಿದೆ. ಅಪಘಾತಕ್ಕೆ ಕಾರಣರಾದ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಮೂವರು ವಿದ್ಯಾರ್ಥಿಗಳು ಭೀಕರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.
ಈ ಸಂಬಂಧ ಚಿಕ್ಕಜಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಇನ್ನೂ ಘಟನಾ ಸ್ಥಳದಿಂದ ಪರಾರಿಯಾದ ಚಾಲಕನಿಗಾಗಿ ಬಲೆ ಬೀಸಿದ್ದಾರೆ..