ಕೋಲ್ಕತ್ತಾ : ಆರ್.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಸಂಜಯ್ ರಾಯ್‌ಗೆ (34) ಜೀವಾವಧಿ ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿ ಕೋಲ್ಕತ್ತಾ ಕೋರ್ಟ್ ತೀರ್ಪು ಪ್ರಕಟಿಸಿದೆ.
ಕೋಲ್ಕತ್ತಾ ಸೆಷನ್ಸ್ ಕೋರ್ಟ್‌ನ ನ್ಯಾಯಾಧೀಶ ಅನಿರ್ಬನ್ ದಾಸ್ ಅವರಿದ್ದ ಏಕಸದಸ್ಯ ಪೀಠ ಸಂಜಯ್ ರಾಯ್‌ನನ್ನು ದೋಷಿ ಎಂದು ತೀರ್ಪು ಪ್ರಕಟಿಸಿ, ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು, ಇಂದು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿತು. ಈ ವಿಚಾರಣೆ ನಡೆಸಿದ 57 ದಿನಗಳಲ್ಲಿ ಕೋರ್ಟ್ ತೀರ್ಪು ಪ್ರಕಟಿಸಿರುವುದು ವಿಶೇಷವಾಗಿದೆ.
ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ಗಳ ಅಡಿಯಲ್ಲಿ ಕೋರ್ಟ್ ಶಿಕ್ಷೆ ವಿಧಿಸಿದೆ. ಇದೇ ವೇಳೆ ಸಂತ್ರಸ್ತೆ ಕುಟುಂಬಕ್ಕೆ 17 ಲಕ್ಷ ರೂ. ಪರಿಹಾರ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿತು. ಆದ್ರೆ ಸಂತ್ರಸ್ತೆ ಪೋಷಕರು ತಮಗೆ ಪರಿಹಾರ ಬೇಡವೆಂದರು.
ಈ ವೇಳೆ ಕೋರ್ಟ್, ಕಾನೂನು ಪ್ರಕಾರವೇ ಪರಿಹಾರ ನೀಡಲು ಆದೇಶ ನೀಡಲಾಗಿದೆ. ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೆ ದೋಷಿಯಾಗಿರುವ ಸಂಜಯ್ ರಾವ್ ನಾನು ಅಮಾಯಕ. ಯಾವುದೇ ಕೃತ್ಯ ಎಸಗಿಲ್ಲ ಎಂದು ಹೇಳಿ ತನ್ನ ಮೇಲಿದ್ದ ಆರೋಪಗಳನ್ನು ನಿರಾಕರಿಸಿತ್ತು ಎಂದು ಹೇಳಲಾಗಿದೆ.