ಕೇರಳದಲ್ಲಿ ಮುಂದುವರೆದ ವರುಣನಾರ್ಭಟ, ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.
ಕೇಕೇ ಹಾಕುತ್ತಿರುವ ರಣಮಳೆಯಿಂದಾಗಿ ಕೇರಳದ ವಯನಾಡ್ ಜಿಲ್ಲೆಯ ಮೂರು ಗ್ರಾಮಗಳಲ್ಲಿ ಭೀಕರ ಭೂ ಕುಸಿತ ಸಂಭವಿಸಿದ್ದು 41ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ, ಇನ್ನೂ 150ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿಕೊಂಡಿದ್ದು, ಮಳೆಯ ನಡುವೆಯೇ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಕೇರಳದಲ್ಲಿ ಸುರಿದ ಭಾರಿ ಮಳೆಯಿಂದಾಗಿ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಯಿಕ್ಕೋಡ್, ಮಲಪ್ಪುರಂ, ವಯನಾಡು, ಕಾಸರಗೋಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಪತ್ತನಂತಿಟ್ಟ,ಇಡುಕ್ಕಿ, ತ್ರಿಶೂರ್,ಅಲಪ್ಪುಳ, ಕೊಟ್ತಾಯಂ, ಎರ್ನಾಕುಲಂ, ಪಾಲಕ್ಕಾಡ್ ನಲ್ಲಿ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.