ನವದೆಹಲಿ : ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಇಂದು ದಾಖಲಿಸಲಾಗಿದೆ. 73 ವಯಸ್ಸಿನ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಎಐಐಎಂಎಸ್‌ನಲ್ಲಿ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರಾಜಿವ್ ನಾರಾಂಗ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಧನಕರ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ವೈದ್ಯರ ತಂಡವು ಅವರ ಆರೋಗ್ಯವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಡಾಕ್ಟರ್ ತಿಳಿಸಿದ್ದಾರೆ.