ಕಳೆದೆರಡು ದಿನಗಳ ಹಿಂದೆಯಷ್ಟೆ ವಯನಾಡಿನಲ್ಲಿ ಸಂಭವಿಸಿದ ಭೀಕರ ಪ್ರವಾಹದ ಭೂಕುಸಿತದಿಂದಾಗಿ ಅಪಾರ ಸಂಖ್ಯೆಯಲ್ಲಿ ಸಾವು ನೋವುಗಳು ಉಂಟಾಗಿದೆ. ಇಲ್ಲಿಯವರೆಗೆ 333 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 300 ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿದ್ದಾರೆ ಎಂದು ವರದಿಯಾಗಿದೆ, (ಆ.04) ಆರನೇ ದಿನವೂ ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಇದೀಗ ಕರ್ನಾಟಕ ಸರ್ಕಾರ ವಯನಾಡು ನಲ್ಲಿ ಸರ್ಕಾರದಿಂದ 100 ಮನೆ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯನವರು ಭರವಸೆ ನೀಡಿದ್ದಾರೆ.

ಕೇರಳ ರಾಜ್ಯದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಲೆಕ್ಕವಿಲ್ಲದಷ್ಟು ಮಂದಿ ಸಾವನ್ನಪ್ಪಿದ್ದಾರೆ, ನೂರಾರು ಮಂದಿ ಮಣ್ಣಿನಡಿ ಸಿಲುಕಿದ್ದಾರೆ. ಆರನೇ ದಿನವೂ ಸಹ ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿದೆ ಮತ್ತೆ 2 ಶವಗಳನ್ನು ಹೊರತೆರೆಯಲಾಗಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಮತ್ತಷ್ಟು ಶವಗಳಿಗಾಗಿ ಶೋಧ ಕಾರ್ಯ ಇನ್ನಷ್ಟು ಮುಂದುರೆದಿದ್ದೂ. ಮಾಹಿತಿಯ ಪ್ರಕಾರ ಸುಮಾರು ಆರು ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರು ಈ ವಯನಾಡಿನ ಭೂಕುಸಿತದಲ್ಲಿ ಕಾರ್ಯಾಚರಣೆಗೆ ಸಾಥ್ ನೀಡಿದ್ದಾರೆ. ಜೊತೆಗೆ ಎನ್.ಡಿ.ಆರ್‍.ಎಫ್, ಸೇನೆ, ಎಸ್.ಡಿ.ಆರ್‍.ಎಫ್, ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ತಂಡ ಚುಕ್ಕಾಣಿ ಹೂಡಿದೆ.

ಇನ್ನೂ ದುರಂತದಲ್ಲಿರುವ ವಯನಾಡು ಭೂಕುಸಿತದ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿದಂತಹ ಜನರಿಗೆ ನೆರವು ನೀಡುವ ಕಾರ್ಯಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ವಯಾನಾಡಿನಲ್ಲಿ ಕರ್ನಾಟಕ ಸರ್ಕಾರದಿಂದ ನೂರು ಮನೆಗಳನ್ನು ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯನವರು ಭರವನೆ ನೀಡಿದ್ದಾರೆ. ಈ ಮಾಹಿತಿಯನ್ನು ಸ್ವತಃ ತಮ್ಮ ಎಕ್ಸ್ ಖಾತೆಯಲ್ಲಿ ಈ ಪೋಸ್ಟ್ ಮಾಡಿದ್ದಾರೆ. ವಯನಾಡಿನಲ್ಲಿ ನಡೆದ ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ಹಾಗೂ ಕೇರಳ ಸರ್ಕಾರದೊಂದಿಗೆ ಕರ್ನಾಟಕ ಒಗ್ಗಟ್ಟಿನಿಂದ ಕೈಜೋಡಿಸಿ ನಿಂತಿದೆ.

ವಯನಾಡಿನ ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೀಡಿದ್ದೇನೆ. ವಯನಾಡಿನ ಭೂಕಿಸಿತ ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ನಿಮ್ಮೊಂದಿಗೆ ನಾವಿದ್ದೇವೆ ಮರಳಿ ಸೂರು ಪಡೆಯೋಣ ಜೊತೆಯಾಗಿ ಮನೆ ಕಟ್ಟೋಣ ಎಂಬ ಭರವಸೆಯ ನುಡಿಯನ್ನು ಸಿಎಂ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *